– ಅಂದು ಮೋದಿ ಅಭಿಮಾನಿ, ಇಂದು ಎದುರಾಳಿಯಾಗಿದ್ದೇಕೇ?
ಜೈಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಘೋಷಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ವಾರಣಾಸಿಯಿಂದ (Varanasi) ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೇನೆ. ನಿಮ್ಮಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿ, ಬೆಂಬಲದಿಂದ ನಾನು ಉತ್ಸುಕನಾಗಿದ್ದೇನೆ. ನಾಮಪತ್ರ ಸಲ್ಲಿಕೆ ಹಾಗೂ ಮುಂದಿನ ಮಾಹಿತಿಗಳ ಬಗ್ಗೆ ವೀಡಿಯೋ ಸಂದೇಶಗಳ ಮೂಲಕ ನಿಮಗೆ ತಿಳಿಸುತ್ತಿರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತವರಲ್ಲಿ ಚೆನ್ನೈಗೆ ಹೀನಾಯ ಸೋಲು – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ
Advertisement
Advertisement
ಅಂದು ಅಭಿಮಾನಿ – ಇಂದು ಎದುರಾಳಿ:
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2014ರಲ್ಲಿ ನಾನು ಮೋದಿ ಅಭಿಮಾನಿಯಾಗಿದ್ದೆ. ಪ್ರಧಾನಿಗಳನ್ನು ಬೆಂಬಲಿಸುವ ಹಲವು ವೀಡಿಯೋಗಳನ್ನು ಶೇರ್ ಮಾಡಿದ್ದೆ. ರಾಹುಲ್ ಗಾಂಧಿ (Rahul Gandhi), ಅರವಿಂದ್ ಕೇಜ್ರಿವಾಲ್ ಅವರಿಗೆ ವಿರುದ್ಧವಾದ ವೀಡಿಯೋಗಳನ್ನು ಶೇರ್ ಮಾಡಿದ್ದೆ. ನಾನು ಬಿಜೆಪಿ ಬಿಟ್ಟು ಬೇರೆ ಯಾವುದೇ ಪಕ್ಷಕ್ಕೆ ಮತ ಹಾಕಲ್ಲ ಎಂದು ಶಪಥ ಮಾಡಿದ್ದೆ. ಆದ್ರೆ ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಆದ್ದರಿಂದಲೇ ನಾನು ಈ ಬಾರಿ ವಾರಣಾಸಿಯಿಂದ ಪ್ರಧಾನಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
Advertisement
ಇದೇ ವಾರ ನಾನು ನಾಮಪತ್ರ ಸಲ್ಲಿಸುತ್ತೇನೆ, ನನ್ನ ನಾಮಪತ್ರ ಸಲ್ಲಿಕೆಯು ವಿಭಿನ್ನವಾಗಿ ಇರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಕ್ರೀಸ್ ಬಿಟ್ಟುಕೊಡದ ಮಹಿ – ಡೇರಿಲ್ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್ ಗರಂ!