ಬೈರೂತ್: ಒಂದು ವರ್ಷ ಕಳೆದರೂ ಇಸ್ರೇಲ್-ಹಮಾಸ್-ಹಿಜ್ಬುಲ್ಲಾ (Israel Hezbollah War) ನಡುವೆ ಸೇಡು, ಪ್ರತೀಕಾರದ ದಾಳಿಗಳು ತೀವ್ರಗೊಳ್ಳುತ್ತಿವೆ. ಬೈರೂತ್ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ. ಇರಾನ್ ಸುಪ್ರೀಂ ಲೀಡರ್ ಇಸ್ರೇಲ್ ವಿರುದ್ಧ ಗುಡುಗಿದ ಬಳಿಕ ಇಸ್ರೇಲ್ ತನ್ನ ವಾಯುದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.
ಅದರಂತೆ ಸೋಮವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಲಾಜಿಸ್ಟಿಕ್ ಘಟಕದ ಮುಖ್ಯಸ್ಥ ಸುಹೇಲ್ ಹುಸೇನ್ ಹುಸೇನಿ ಅವರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ ಮಂಗಳವಾರ (ಇಂದು) ಹೇಳಿಕೊಂಡಿದೆ. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್
ಸೇನಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್, ಸೋಮವಾರ ಅಂದ್ರೆ ಅಕ್ಟೋಬರ್ 7ರಂದು ಯುದ್ಧದ ವರ್ಷಾಚರಣೆ ವೇಳೆ ಬೈರೂತ್‌ನಲ್ಲಿ ನಡೆಸಿದ ದಾಳಿಯಲ್ಲಿ ಹುಸೇನಿಯನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದೆ. ಆದ್ರೆ ಹಿಜ್ಬುಲ್ಲಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ತಾಂತ್ರಿಕ ದೋಷದಿಂದ ಯಡವಟ್ಟು; ಏಕಕಾಲಕ್ಕೆ ಕ್ವಾಂಟಾಸ್ ಫ್ಲೈಟ್‌ನ ಎಲ್ಲಾ ಟಿವಿ ಸ್ಕ್ರೀನ್‌ನಲ್ಲಿ ಸೆಕ್ಸ್ ವೀಡಿಯೋ ಪ್ರಸಾರ!
ಸೋಮವಾರ (ಅ.7) ಇಸ್ರೇಲ್ ಒಂದು ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ನೆಲೆಗಳನ್ನ ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು. ದಕ್ಷಿಣ ಲೆಬನಾನ್‌ನಲ್ಲಿ ಒಂದು ಗಂಟೆಯೊಳಗೆ 120ಕ್ಕೂ ಹೆಚ್ಚು ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿತ್ತು.
ಇದಕ್ಕೂ ಮುನ್ನಾದಿನ ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್ (Israel) ವಾಯುಪಡೆ ನಡೆಸಿದ್ದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದರು. ಈ ಬೆನ್ನಲ್ಲೇ ಹಮಾಸ್ ಕೂಡ ಕೌಂಟರ್ ಅಟ್ಯಾಕ್ ಮಾಡಿತ್ತು. ಇಸ್ರೇಲ್ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು (Rocket Fired) ಹಾರಿಸಿತ್ತು. ಇದನ್ನೂ ಓದಿ: ವಾಯುದಾಳಿಗೆ ಕೌಂಟರ್ ಅಟ್ಯಾಕ್ – ದಕ್ಷಿಣ ಇಸ್ರೇಲ್ ಕಡೆಗೆ ಹೊರಟ ಸ್ಫೋಟಕ ತುಂಬಿದ ರಾಕೆಟ್