ಬಾಗಲಕೋಟೆ: ವಿಶ್ವವಿದ್ಯಾಲಯದಿಂದ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯಾದ್ಯಂತ ವಾಣಿಜ್ಯ ವಿಭಾಗದ (Commerce Lecturer) ಡಿಗ್ರಿ ಕಾಲೇಜುಗಳ ಉಪನ್ಯಾಸಕರು ಕಪ್ಪು ಪಟ್ಟಿಯನ್ನು ಧರಿಸಿ ವಿದ್ಯಾರ್ಥಿಗಳಿಗೆ (Student) ಪಾಠ ಮಾಡಿದ್ದಾರೆ.
ವಾಣಿಜ್ಯ ವಿಭಾಗಕ್ಕೆ ಇರುವ ಫೈನಾನ್ಸಿಯಲ್ ಮ್ಯಾನೇಜಮೆಂಟ್ (Financial Management) ವಿಷಯವನ್ನು ಅರ್ಥಶಾಸ್ತ್ರ (Economics) ವಿಭಾಗದ ಉಪನ್ಯಾಸಕರು ಬೋಧನೆ ಮಾಡುವಂತೆ ಬಾಗಲಕೋಟೆ ವಿಶ್ವವಿದ್ಯಾಲಯ (Bagalkot University) ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯನ್ನು ಖಂಡಿಸಿ ಇಳಕಲ್, ಮುಧೋಳ, ಬಾದಾಮಿ, ಗುಳೇದಗುಡ್ಡ ಸೇರಿದಂತೆ ಜಿಲ್ಲೆಯ ವಾಣಿಜ್ಯ ವಿಭಾಗದ ಉಪನ್ಯಾಸಕರು ಪ್ರತಿಭಟಿಸಿದ್ದಾರೆ. ಇದನ್ನೂ ಓದಿ: ಇವಿಎಂ ಮ್ಯಾನಿಪ್ಯುಲೆಟ್ ಆಗಿದೆ ಅನ್ನೋದಕ್ಕೆ ಸಾಕ್ಷಿಗಳಿಲ್ಲ – ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ
Advertisement
Advertisement
ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಿಗೆ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ವಿಷಯದ ಬಗ್ಗೆ ಸಂಪೂರ್ಣ ಹಿಡಿತ ಇರುವುದಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಲ್ಲದೇ ವಾಣಿಜ್ಯ ವಿಭಾಗದ ಉಪನ್ಯಾಸಕರ ಹುದ್ದೆಗಳಿಗೂ ಕುತ್ತುಬರುವ ಸಾಧ್ಯತೆ ಇದೆ ಎಂದು ಹೇಳಿ ಕಪ್ಪು ಪಟ್ಟಿಧರಿಸಿ ಸಾಂಕೇತಿಕ ಪ್ರತಿಭಟನೆಗೆ (Protest) ಇಳಿದಿದ್ದಾರೆ.
Advertisement
ಕೂಡಲೇ ವಿಶ್ವವಿದ್ಯಾಲಯ ಈ ಆದೇಶವನ್ನು ಹಿಂಪಡೆಯದಿದ್ದರೆ ಮೌಲ್ಯಮಾಪನ ಸೇರಿದಂತೆ ಬೋಧನೆ (ಕ್ಲಾಸ್‌ಗಳನ್ನು) ಬಹಿಷ್ಕರಿಸಿ ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ಮಾಡುವುದಾಗಿ ಬಾಗಲಕೋಟೆ ವಿಶ್ವವಿದ್ಯಾಲಯ ವಾಣಿಜ್ಯ ಮತ್ತು ವ್ಯವಸ್ಥಾಪನಾ ಪ್ರಾಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕುರನಾಳ ಎಚ್ಚರಿಕೆ ನೀಡಿದ್ದಾರೆ.