ಬೆಂಗಳೂರು: ಕೇಂದ್ರ ಸರ್ಕಾರ 14 ಕೆಜಿ LPG ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ.
19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 158 ರೂ. ಇಳಿಕೆ ಕಂಡಿದೆ. ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ (Commercial Gas Cylinder) ಬೆಲೆ ಇಳಿಕೆ ಕಂಡಿದ್ದು, 1,767.50 ರೂ. ಇದ್ದ ಸಿಲಿಂಡರ್ ಬೆಲೆ ಇಂದು 1,609.50 ರೂ. ಆಗಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡುವುದಾಗಿ ಘೋಷಿಸಿತು. ಕಳೆದ ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದರು. ಇದನ್ನೂ ಓದಿ: ಚಂದ್ರನ ಮೇಲೆ ಹೊಸ ಕುಳಿ ಮೂಡಿಸಿದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆ
ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನ ಹೆಚ್ಚಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ. ಇದನ್ನೂ ಓದಿ: 11% ಏರಿಕೆ, ಆಗಸ್ಟ್‌ನಲ್ಲಿ 1.59 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?
Web Stories