ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ (LPG Cylinder) ಬೆಲೆ ದೆಹಲಿಯಲ್ಲಿ (Delhi) 100 ರೂ.ನಷ್ಟು ಅಗ್ಗವಾಗಿದೆ. ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ.
19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ. ಈ ಹಿನ್ನೆಲೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಮಾರಾಟ ಬೆಲೆ 1,680 ರೂ. ಆಗಿದೆ. ಇದನ್ನೂ ಓದಿ: ತರಕಾರಿ ಬೆಲೆಯೂ ತುಟ್ಟಿ – ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ; ಯಾವ ತರಕಾರಿಗೆ ಎಷ್ಟು ದರ?
ಮುಂಬೈನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 1852.50 ರೂ. ಆಗಿದೆ. ಕೋಲ್ಕತ್ತಾದಲ್ಲಿ 1820.50 ಹಾಗೂ ಚೆನ್ನೈನಲ್ಲಿ 1852.50 ರೂ. ಆಗಿದೆ. ಆದರೆ ಗೃಹಬಳಕೆ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇದನ್ನೂ ಓದಿ: ಇಂದಿನಿಂದ ಎಕ್ಸ್ಪ್ರೆಸ್ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ
Web Stories