ನವದೆಹಲಿ: ಕಳೆದ ಒಂದು ವಾರದಿಂದ ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರದ ನಡುವೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ ಏರಿಕೆಯಾಗಿರುವುದು ಯುಗಾದಿ ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಮತ್ತೆ ಏರಿಕೆ ಮಾಡಿದೆ. ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ 19 ಕೆಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ. ಎಲ್ಪಿಜಿ ಪರಿಷ್ಕೃತ ದರವನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಎಲ್ಪಿಜಿ ಸಿಲಿಂಡರ್ ಬೆಲೆ ಇದೇ ಮೊದಲಬಾರಿಗೆ 250 ರೂ. ಏರಿಕೆಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಎಲ್ಪಿಜಿ ಬಳಕೆದಾರರಿಗೆ ಶುಭಸುದ್ದಿ – ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 102.5 ರೂ. ಕಡಿತ
Advertisement
Advertisement
2021ರ ಅಕ್ಟೋಬರ್ 6 ರಿಂದ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಕಳೆದ ಮಾರ್ಚ್ 22ರಂದು ಪೆಟ್ರೋಲ್, ಡೀಸೆಲ್ ದರದೊಂದಿಗೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 50 ರೂ. ಏರಿಕೆಯಾಗಿತ್ತು. ಇದರಿಂದ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ., ಕೋಲ್ಕತಾದಲ್ಲಿ 976 ರೂ., ಮುಂಬೈನಲ್ಲಿ 949.50 ರೂ., ಚೆನ್ನೈನಲ್ಲಿ 965.50 ರೂ.ಗೆ ಮಾರಾಟವಾಗುತ್ತಿತ್ತು. ಇದೀಗ 14 ಕೆ.ಜಿ. ಸಿಲಿಂಡರ್ ಬೆಲೆ ಯಥಾಸ್ಥಿತಿಯಲ್ಲಿದ್ದರೂ 19 ಕೆಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ 14 ಕೆ.ಜಿ. ಎಲ್ಪಿಜಿ ಸಿಲಿಂಡರ್ಗೆ 954.50 ರೂ. ಇದ್ದು, 19 ಕೆಜಿ ಎಲ್ಪಿಜಿ ಸಿಲಿಂಡರ್ ದರ 1685.50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಎಲ್ಪಿಜಿ ಆಯ್ತು ಈಗ ಸಿಎನ್ಜಿ, ಪಿಎನ್ಜಿ ದರದಲ್ಲೂ ಏರಿಕೆ
Advertisement
ಇಂದಿನಿಂದ ಬೆಲೆ ಹೆಚ್ಚಳ
ಇಂದಿನಿಂದಲೇ ಬೆಲೆ ಹೆಚ್ಚಳವಾಗಿದ್ದು ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ಸಿಲಿಂಡರ್ನ ಬೆಲೆ ಪ್ರತಿ ಯೂನಿಟ್ಗೆ 2,253 ರೂ., ಕೋಲ್ಕತ್ತಾದಲ್ಲಿ ಸಿಲಿಂಡರ್ ಬೆಲೆ 2,351 ರೂ., ಮುಂಬೈ ಮತ್ತು ಚೆನ್ನೈನಲ್ಲಿ, ಇದು ಕ್ರಮವಾಗಿ ರೂ 2,205 ಮತ್ತು 2,406 ಬೆಲೆಗೆ ಮಾರಾಟವಾಗುತ್ತಿದೆ.