– ಅಕ್ರಮವಾಗಿ ಸಂಗ್ರಹಿಸಿಟ್ಟ ಸೀರೆ, ಬಳೆ ಜಪ್ತಿ
ಬೀದರ್: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಅಕ್ರಮವಾಗಿ ಸೀರೆ, ಬಳೆ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದಾರೆ ಎಂಬ ಅರೋಪ ಮೇಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನ್ನಾನ್ ಸೇಠ್ (Mannan Sait) ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು (Commercial Tax Officers) ಹಾಗೂ ಬೀದರ್ (Bidar) ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಶನಿವಾರ ತಡರಾತ್ರಿ ಅಧಿಕಾರಿಗಳು ದಾಳಿ ಮಾಡಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸೀರೆ, ಬಳೆ ಮತ್ತು ಇತರ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನ್ನಾನ್ ಸೇಠ್ ವಿರುದ್ಧ ಬೀದರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡಾ ದಾಖಲಾಗಿದೆ. ಇದನ್ನೂ ಓದಿ: ಸಿದ್ದು ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ ರಾಜುಗೌಡ
ಬೀದರ್ ಉತ್ತರ ಕ್ಷೇತ್ರದ ಮತದಾರರಿಗೆ ಹಂಚಲು ಸೀರೆ, ಅರಿಶಿನ-ಕುಂಕುಮ ಕಿಟ್, ಆಟೋ ಡ್ರೈವರ್‌ಗಳ ಸಮವಸ್ತ್ರಗಳನ್ನು ಸಂಗ್ರಹಿಸಲಾಗಿದ್ದು, ಅವುಗಳ ಮೇಲೆ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಹಾಕಲಾಗಿದೆ. ಮತದಾರರಿಗೆ ಹಂಚಲು ಮನೆಯಲ್ಲಿ ಈ ಎಲ್ಲಾ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ. ಬೀದರ್ ಸಹಾಯಕ ಆಯುಕ್ತ ಹಾಗೂ ವಿಧಾನಸಭಾ ಚುನಾವಣಾ ಆರ್‌ಒ ಲವೀಶ್ ಒರಡಿಯಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಕೋಲಾರದಿಂದ ಸಿದ್ದು ಸ್ಪರ್ಧೆಗೆ ರೆಡ್ ಸಿಗ್ನಲ್ – ವರುಣಾದಿಂದಲೇ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳಿದ್ದು ಯಾಕೆ?