ಬೆಂಗಳೂರು: ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು ನಗರ ಪೊಲೀಸ್ ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಸಿಎಂ ಸೂಚನೆ ಬೆನ್ನಲ್ಲೇ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಗಳ ಸಭೆ ನಡೆದಿದೆ.
ಇಂದು ಬೆಳಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ನಗರದ ಕಾನೂನು ಸುವ್ಯವಸ್ಥೆ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಬಿಎಸ್‍ವೈ ಸೂಚಿಸಿದ್ದರು ಎಂಬುದಾಗಿ ತಿಳಿದುಬಂದಿದೆ.
Advertisement
Advertisement
ಸಿಎಂ ಭೇಟಿಯಾದ ಬೆನ್ನಲ್ಲೇ ದಿಢೀರ್ ಸಭೆ ನಡೆಸಿರುವ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳೊಂದಿಗೆ ಚರ್ಚೆ ನಡೆಸಿ ಸಿಎಂ ಸೂಚನೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ನಗರದಲ್ಲಿ ಕಾನೂನು ವ್ಯವಸ್ಥೆ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Advertisement
ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕೆಲವೇ ಗಂಟೆಗಳಲ್ಲಿ ಸಿದ್ಧತೆ ನಡೆಸಿದ್ದ ಪೊಲೀಸರು ಕಟ್ಟುನಿಟ್ಟಿನ ವ್ಯವಸ್ಥೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ್ದ ಅಲೋಕ್ ಕುಮಾರ್ ಅವರು, ಪ್ರಮಾಣ ವಚನ ಕಾರ್ಯಕ್ರಮ ಏನೆಲ್ಲ ಭದ್ರತೆ ಮಾಡಬೇಕೋ ಅದನ್ನು ಮಾಡುತ್ತೇವೆ. ನಾವು ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ. ಕೇಂದ್ರದ ನಾಯಕರು ಬಂದರೆ ಹೆಚ್ಚುವರಿ ಭದ್ರತೆ ಒದಗಿಸುವುದಾಗಿ ಹೇಳಿದ್ದರು.