ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಹಿತ ಕಾಪಾಡುವುದು ನನ್ನ ಜವಾಬ್ದಾರಿ. ಹೀಗಾಗೀ ಪಕ್ಷ ಕಟ್ಟಿ ಬೆಳೆಸಿದ ಕಟ್ಟ ಕಡೆಯ ಕಾರ್ಯಕರ್ತನಿಗೂ ರಾಜಕೀಯ, ಸಾಮಾಜಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಅವರಲ್ಲಿ ಒಬ್ಬನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರೂ ನಾನು ಪಾಲಿಸಲು ಬದ್ಧ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ರಾಜ್ಯಧ್ಯಕ್ಷ ಹುದ್ದೆ ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ (New Delhi) ಮಾತನಾಡಿದ ಅವರು, ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ನಮ್ಮಲ್ಲಿ ಹಿರಿಯ ನಾಯಕರಿದ್ದಾರೆ. ಅವರ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಪಕ್ಷ ಇದ್ದರೆ ನಿಖಿಲ್ ಕುಮಾರಸ್ವಾಮಿ. ಪಕ್ಷಕ್ಕೆ ಸಾವಿರಾರು ಕಾರ್ಯಕರ್ತರನ್ನು ಹುಟ್ಟು ಹಾಕುವ ಶಕ್ತಿ ಇದೆ. ಹೀಗಾಗೀ ಪಕ್ಷದ ತಿರ್ಮಾನವೇ ಅಂತಿಮ ಎಂದರು. ಇದನ್ನೂ ಓದಿ: ಪ್ರತಿ ತಿಂಗಳು ಎಷ್ಟು ಮಂದಿಗೆ ಯುವನಿಧಿ ಹಣ ಸೇರುತ್ತಿದೆ – ಲೆಕ್ಕ ಕೊಟ್ಟ ಸರ್ಕಾರ
Advertisement
ಉಪಚುನಾವಣೆ ಬಳಿಕ ನಾನು ಕೈಕಟ್ಟಿ ಕೂತಿಲ್ಲ. ರೈತರ ನಿಯೋಗದೊಂದಿದೆ ದೆಹಲಿಗೆ ಬಂದಿದ್ದೇನೆ. ತಂಬಾಕು ಬೆಳೆಗಾರರ ಸಮಸ್ಯೆಗಳ ಕೇಂದ್ರ ಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇದೇ ಅವಧಿಯಲ್ಲಿ ಗೃಹ ಸಚಿವ ಅಮಿತ್ ಶಾ, ಉಸ್ತುವಾರಿ ರಾಧಮೋಹನ್ ಸಿಂಗ್, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದೇನೆ. ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆಗಳಲ್ಲಿ ಒಟ್ಟಾಗಿ ಹೋಗುವ ಬಗ್ಗೆ ಚರ್ಚೆ ಮಾಡಿದ್ದೇನೆ. ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ಗೊತ್ತಿರುವ ಹಿನ್ನೆಲೆ ಆ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು
Advertisement
Advertisement
ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿ, ಯಾರ ಕಲ್ಯಾಣ ಆಗಿದೆ ಎಂದು ಕಾಂಗ್ರೆಸ್ ಸಮಾವೇಶ ಮಾಡಿದೆ? ಹೆಚ್‌ಡಿ ದೇವೇಗೌಡರ ಕುಟುಂಬವನ್ನು ನಿಂದಿಸುವ ಸಮಾವೇಶ ಮಾಡಿದ್ದಾರೆ. ನಮ್ಮನ್ನು ನಿಂದಿಸಿ ರಾಜಕೀಯವಾಗಿ ದುರ್ಬಲ ಮಾಡುವ ಹುನ್ನಾರ ಮಾಡಿದ್ದಾರೆ. ದೇವೇಗೌಡರ ಕುಟುಂಬವನ್ನು ನಿಂದಿಸಿದರೆ ಏನು ಸಿಗುತ್ತೆ? ಅದಕ್ಕೆ ಪ್ರತಿಯಾಗಿ ಸಮಾವೇಶ ಮಾಡುವುದರಿಂದ ಏನು ಲಾಭ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು. ಕುಮಾರಸ್ವಾಮಿ ಸಂಸತ್‌ನಲ್ಲಿ ಬ್ಯುಸಿಯಾಗಿರುವ ಹಿನ್ನೆಲೆ ಮಂಡ್ಯದಲ್ಲಿ ಮಾಡಬೇಕಿದ್ದ ಸಮಾವೇಶ ಮುಂದೂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ
Advertisement
ಉಪಚುನಾವಣೆಯಲ್ಲಿ (Channapatna By Election) ಅನಿರೀಕ್ಷಿತವಾಗಿ ಸ್ಪರ್ಧಿಸಿ 87,000 ಮತಗಳನ್ನು ಪಡೆದು ಸೋಲನ್ನಪ್ಪಿದ್ದೇನೆ. ನಮಗೆ ಜಯ ಸಿಕ್ಕಿರದೇ ಇರಬಹುದು, ಫಲ ಸಿಕ್ಕಿದೆ. ಜನರ ತೆರಿಗೆಯ ದುಡ್ಡನ್ನು ಚುನಾವಣಾ ಮುನ್ನಾ ದಿನ ಗೃಹಲಕ್ಷ್ಮಿ ಯೋಜನೆ ಮೂಲಕ ನೀಡಲಾಯಿತು. ಇದರ ಜೊತೆಗೆ ಒಂದು ಸಮುದಾಯ ನಮ್ಮನ್ನು ಕೈಬಿಟ್ಟಿತು. ಗಣೇಶ ವಿಸರ್ಜನೆ ಪ್ರಕರಣ ನಡೆದಾಗ ಎರಡು ಸಮುದಾಯದ ನಡುವೆ ಘರ್ಷಣೆಯಾಯಿತು. ಆಗ ಆಸ್ತಿ ಹಾನಿಯಾದವರಿಗೆ ಸಮುದಾಯ ಕೇಳದೆ ಹೆಚ್‌ಡಿ ಕುಮಾರಸ್ವಾಮಿ ಸಹಾಯ ಮಾಡಿದರು. ಮುಸ್ಲಿಮರಿಗೆ ಸಾಂತ್ವನ ಹೇಳಿ ನೆರವು ನೀಡಿದರು. ಹಲಾಲ್, ಹಿಜಾಬ್ ಪರ ಧ್ವನಿ ಎತ್ತಿದ್ದು ಕುಮಾರಸ್ವಾಮಿ. ಅದಾಗ್ಯೂ ನಮ್ಮನ್ನು ಬಿಟ್ಟು ಕಾಂಗ್ರೆಸ್ ಆಯ್ಕೆ ಮಾಡಿದ್ದಾರೆ. ಅದು ಅವರ ನಿರ್ಧಾರ. ನಾವು ಪ್ರಶ್ನೆ ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್
ಚನ್ನಪಟ್ಟಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರು 1,200 ಕೋಟಿ ಅನುದಾನ ತಂದಿದ್ದಾರೆ. ಆದರೆ ನಾವು ಪ್ರಚಾರ ಪಡೆದಿಲ್ಲ. ಆತ್ಮ ಸಾಕ್ಷಿಯಾಗಿ ಕೆಲಸ ಮಾಡಿದ್ದೇವೆ. ಮಾಡಿದ ಕೆಲಸ ಹೆಚ್‌ಡಿ ದೇವೇಗೌಡರು, ಹೆಚ್‌ಡಿ ಕುಮಾರಸ್ವಾಮಿ ಹೇಳಿಕೊಂಡಿಲ್ಲ. ಮಾಡಿದ ಅಭಿವೃದ್ಧಿ ಜನರ ಮುಂದೆ ಹೇಳಬೇಕಿತ್ತು. ಜನರ ನೆನಪು ಕಡಿಮೆ. ಹೀಗಾಗಿ ನಾವು ನೆನಪಿಸಬೇಕಿತ್ತು. ಇದರಲ್ಲಿ ನಾವು ಎಡವಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ಮೊದಲ ದಿನವೇ ಬಿಜೆಪಿ ಶಾಸಕರಲ್ಲಿ ಸಮನ್ವಯದ ಕೊರತೆ