ಕೆರೆಬೇಟೆ ಖ್ಯಾತಿಯ ನಟ ಗೌರಿ ಶಂಕರ್ ನಾಯಕನಾಗಿ ನಟಿಸಿರುವ ಕಾಮನ್ ಮ್ಯಾನ್ (Common Man) ಸಿನಿಮಾದ ಟ್ರೈಲರ್ ಅನ್ನು ಹಿರಿಯ ನಿರ್ದೇಶಕ ಬಿ.ರಾಮಮೂರ್ತಿ ಹಾಗೂ ಸಂಗೀತ ನಿರ್ದೇಶಕ ವಿ.ಮನೋಹರ್ ಬಿಡುಗಡೆ ಮಾಡಿದರು. ಓಂ ಸಾಯಿ ಪ್ರಕಾಶ್ ನಿರ್ದೇಶನದ 106ನೇ ಸಿನಿಮಾ ಇದಾಗಿದ್ದು, ವಿಶೇಷ ಅನಿಸುವಂಥ ಕಥೆಯನ್ನು ಈ ಸಿನಿಮಾದಲ್ಲಿ ಹೇಳಿದ್ದಾರೆ ನಿರ್ದೇಶಕರು. ಕಾಮನ್ ಮ್ಯಾನ್ ಒಬ್ಬ ಮುಖ್ಯಮಂತ್ರಿ ಆಗುವ ರೋಚಕ ಕಥೆ ಸಿನಿಮಾದಲ್ಲಿದೆ.
ರಿಲೀಸ್ ಆಗಿರುವ ಟ್ರೈಲರ್ ಭಾರೀ ಕುತೂಹಲ ಮೂಡಿಸುತ್ತಿದೆ. ಇಡೀ ಸಿನಿಮಾದ ಆಶಯವನ್ನು ಟ್ರೈಲರ್‌ನಲ್ಲಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕರು. ಸ್ಫೂರ್ತಿ ನೀಡುವಂಥ ಕಥೆಯು ಸಿನಿಮಾದಲ್ಲಿದ್ದು, ಮನೆಮಂದಿ ಕೂತು ನೋಡುವಂತಹ ಸಿನಿಮಾ ಇದಾಗಿದೆ. ನಾಯಕ ಗೌರಿ ಶಂಕರ್ ಇದೇ ಮೊದಲ ಬಾರಿಗೆ ಈ ರೀತಿಯ ಪಾತ್ರವನ್ನು ನಿರ್ವಹಿಸಿದ್ದು, ಗೆಲ್ಲುವ ಎಲ್ಲ ಲಕ್ಷಣಗಳೂ ಟ್ರೈಲರ್‌ನಲ್ಲಿವೆ. ಸ್ಯಾಂಡಲ್‌ವುಡ್‌ನಲ್ಲಿ ವಿಶೇಷ ಅನಿಸುವಂಥ ಮತ್ತೊಂದು ಸಿನಿಮಾ ಇದಾಗಲಿದೆ. ಇದನ್ನೂ ಓದಿ: ಕೆರೆಬೇಟೆ ಹುಡುಗ ಗೌರಿಶಂಕರ್ ಹೇಳ್ತಾರೆ `ಕಾಮನ್ ಮ್ಯಾನ್’ ಸ್ಟೋರಿ
ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತೆ ಎಂಬ ಎಳೆ ಇಟ್ಟುಕೊಂಡು ಕಥೆ ಬರೆದು ಸುರಭಿ ಫಿಲಂಸ್ ಅಡಿ ಎನ್. ನರಸಿಂಹಮೂರ್ತಿ ಅವರು ನಿರ್ಮಿಸಿರುವ ‘ಕಾಮನ್ ಮ್ಯಾನ್’ ಚಿತ್ರ ಸೆ.25ರಂದು ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಚಿತ್ರಕಥೆ ರಚಿಸಿ ಆ್ಯಕ್ಷನ್ ಕಟ್ ಹೇಳಿರೋ ಈ ಚಿತ್ರದಲ್ಲಿ ಗೌರಿಶಂಕರ್ ನಾಯಕನಾಗಿ ನಟಿಸಿದ್ದಾರೆ. ದೊಡ್ಡಮಟ್ಟದಲ್ಲೇ ನಿರ್ಮಾಪಕರು ಪ್ರಚಾರದ ಕಾರ್ಯ ಹಮ್ಮಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ದೇವಸ್ಥಾನದ ಮುಂದೆ ಸಿನಿಮಾ ಪ್ರಚಾರದ ಟ್ಯಾಬುಲೋ ವಾಹನಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಜೊತೆಗೆ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುವಂಥ ಪ್ರಯತ್ನವನ್ನೂ ಚಿತ್ರತಂಡ ಮಾಡುತ್ತಿದೆ. ಸಿನಿಮಾ ಕುರಿತಾಗಿ ಮಾತಾಡಿರುವ ಗೌರಿಶಂಕರ್, ಸಾಮಾನ್ಯ ಯುವಕನೊಬ್ಬ ಸರ್ಕಾರದ ಮೇಲೆ ಒತ್ತಡ ತಂದು ಹೇಗೆ ಸಿಎಂ ಆಗ್ತಾನೆ, ರಾಜಕಾರಣಿಗಳಿಂದಲೂ ಆಗದ ಕೆಲಸಗಳನ್ನು ಆತ ಹೇಗೆ ಮಾಡ್ತಾನೆ ಅನ್ನೋದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಚಿತ್ರ ನಿಜಕ್ಕೂ ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲರೂ ಬಂದು ನೋಡುವಂಥ ಸಿನಿಮಾ ಇದಾಗಿದೆ ಅನ್ನುತ್ತಾರೆ. ಇದನ್ನೂ ಓದಿ: ಮೈಸಾ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮಾಸ್
ಗಾಯಕಿ ಚೈತ್ರಾ ಆಚಾರ್, ಕೈಲಾಶ್ ಖೇರ್, ಬಾಬಾ ಸೈಗಲ್‌ರಂಥ ಗಾಯಕರು ಈ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಸಾಯಿಪ್ರಕಾಶ್ ಅವರ ನಿರ್ದೇಶನದ 106ನೇ ಚಿತ್ರ ಇದಾಗಿದ್ದು, ಒಬ್ಬ ಕಾಮನ್ ಮ್ಯಾನ್ ರಾಜ್ಯದ ಸಿಎಂ ಆದರೆ ಏನೆಲ್ಲ ಸುಧಾರಣೆ ಮಾಡಬಹುದು ಎಂಬುದನ್ನು ಈ ಚಿತ್ರ ಮೂಲಕ ಹೇಳಿದ್ದಾರೆ.
ಗೌರಿ ಶಂಕರ್ ಚಿತ್ರದ ನಾಯಕನಾಗಿದ್ದು, ಸೋನಾ ಲದ್ವಾ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಹಿರಿಯ ನಟ ಅಶೋಕ್ ಅವರು ರಾಜ್ಯಪಾಲರ ಪಾತ್ರ ಮಾಡಿದ್ದಾರೆ. ವಿನಯ ಚಂದ್ರ ಅವರ ಸಂಗೀತ, ಜೆ.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಅವರ ಸಾಹಸ ಈ ಚಿತ್ರಕ್ಕಿದೆ. ಕಾಮನ್ ಮ್ಯಾನ್ ಚಿತ್ರದ ಉಳಿದ ಪಾತ್ರಗಳಲ್ಲಿ ಗಣೇಶರಾವ್ ಕೇಸರಕರ್, ಎಸ್ಕಾರ್ಟ್ ಶ್ರೀನಿವಾಸ್, ಪ್ರಕಾಶ್ ತುಮ್ಮಿನಾಡು ಹಾಗೂ ಇತರರು ನಟಿಸಿದ್ದಾರೆ. ವಿನಯ ಚಂದ್ರ ಅವರು ಸಂಗೀತ ನಿರ್ದೇಶನ, ಜೆ.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

