ನವದೆಹಲಿ: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುನ್ನತ ಸಾಧನೆಗೈದ ಭಾರತೀಯ ಕ್ರೀಡಾಪಟುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ದೆಹಲಿಯ ನಿವಾಸದಲ್ಲಿ ಔತಣಕೂಟ ಆಯೋಜಿಸಿದರು.
Advertisement
ಔತಣಕೂಟದಲ್ಲಿ ಕಾಮನ್‍ವೆಲ್ತ್‌ನಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು ಎಲ್ಲರೂ ಭಾಗಿಯಾಗಿದ್ದರು. ಮೋದಿ ಕ್ರೀಡಾಪಟುಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಕಳೆದ ಎರಡು ವಾರಗಳಲ್ಲಿ ಕ್ರೀಡಾ ವಿಭಾಗದಲ್ಲಿ ಎರಡು ದೊಡ್ಡ ಸಾಧನೆ ಮಾಡಲಾಗಿದೆ. ಒಂದು ಕಡೆ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೇ, ಮತ್ತೊಂದು ಕಡೆ ಮೊದಲ ಬಾರಿಗೆ ಭಾರತ ಚೆಸ್ ಒಲಿಂಪಿಯಾಡ್ ಆಯೋಜಿಸಿ ಯಶಸ್ವಿಯಾಗಿದೆ. ಭಾರತ ಚೆಸ್ ಒಲಿಂಪಿಯಾಡ್ ನಡೆಸಿ ಯಶಸ್ವಿಯಾಗಿದ್ದು ಮಾತ್ರವಲ್ಲ, ಅತ್ಯುತ್ತಮ ಪ್ರದರ್ಶನವನ್ನೂ ತೋರಿದೆ. ಚೆಸ್ ಒಲಿಂಪಿಯಾಡ್‍ನಲ್ಲಿ ಪಾಲ್ಗೊಂಡ ಎಲ್ಲಾ ಸ್ಪರ್ಧಾಳುಗಳಿಗೂ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ ಎಂದರು. ಇದನ್ನೂ ಓದಿ: ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ
Advertisement
Visuals from PM @narendramodi ’s interaction with #CWG2022 contingent at his residence.#Cheer4India#HarGharTiranga#AmritMahotsav pic.twitter.com/pFhBx2ZgfU
— DD News (@DDNewslive) August 13, 2022
Advertisement
ನೀವೆಲ್ಲರೂ ನಿಮ್ಮ ನಿಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನನ್ನು ನನ್ನ ನಿವಾಸದಲ್ಲಿ ಭೇಟಿಯಾಗಲು ಬಂದಿರುವುದಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಎಲ್ಲಾ ಭಾರತೀಯರ ಜೊತೆ ಮಾತನಾಡಿದಂತೆ ನಿಮ್ಮ ಜೊತೆಗೂ ಮಾತನಾಡುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ನಮ್ಮ ದೇಶವು ಸ್ವಾತಂತ್ರ್ಯಗೊಂಡ 75 ವರ್ಷ ಪೂರೈಸಲಿದೆ. ನಿಮ್ಮೆಲ್ಲರ ಪರಿಶ್ರಮದಿಂದ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಟೀಂ ಇಂಡಿಯಾದ ಕ್ಯಾಪ್ಟನ್, ಕೋಚ್ ಪದೇ ಪದೇ ಬದಲಾವಣೆ – ಬಿಸಿಸಿಐಗೆ ನೆಟ್ಟಿಗರಿಂದ ಫುಲ್ ಕ್ಲಾಸ್
Advertisement
ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ 22 ಚಿನ್ನ, 15 ಬೆಳ್ಳಿ, 23 ಕಂಚಿನ ಪದಕದೊಂದಿಗೆ ಒಟ್ಟು 61 ಪದಕ ಗೆದ್ದು ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಸಾಧನೆ ಮಾಡಿತ್ತು. ಇದು ಭಾರತ ತನ್ನ ಪ್ರಮುಖ ಪದಕ ಬೇಟೆಯ ಸ್ಪರ್ಧೆಗಳಾದ ಶೂಟಿಂಗ್ ಮತ್ತು ಆರ್ಚರಿ ಇಲ್ಲದೆ ಗಳಿಸಿರುವುದು ವಿಶೇಷವಾಗಿದೆ. ಇದಲ್ಲದೇ ಚೆನ್ನೈನಲ್ಲಿ ನಡೆದಿದ್ದ ಚೆಸ್ ಒಲಿಂಪಿಯಡ್‌ನಲ್ಲೂ ಭಾರತ ಉತ್ತಮ ಸಾಧನೆ ಮಾಡಿತ್ತು.