ಲಂಡನ್: ಇಂದಿನಿಂದ ಬರ್ಮಿಂಗ್ ಹ್ಯಾಂನಲ್ಲಿ ಕಾಮನ್‍ವೆಲ್ತ್ ಗೇಮ್ಸ್ ಆರಂಭಗೊಳ್ಳಲಿದೆ. ಇಂದಿನ ಉದ್ಘಾಟನಾ ಸಮಾರಂಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದು ಭಾರತ ಕ್ರೀಡಾಪಟುಗಳ ತಂಡವನ್ನು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಮತ್ತು ಮನ್‍ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ.
Advertisement
ಕಾಮನ್‍ವೆಲ್ತ್ ಕ್ರೀಡಾಕೂಟದ 22ನೇ ಆವೃತ್ತಿ ಇಂದಿನಿಂದ ಶುರುವಾಗಲಿದೆ. ಇಂಗ್ಲೆಂಡ್‍ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯಲಿರುವ ಈ ಕ್ರೀಡಾಕೂಟದಲ್ಲಿ 72 ಕಾಮನ್‍ವೆಲ್ತ್ ರಾಷ್ಟ್ರಗಳ 5000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಭಾರತದಿಂದ 214 ಸ್ಪರ್ಧಿಗಳು ವಿವಿಧ ಸ್ಫರ್ದೆಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಕ್ರೀಡಾಕೂಟಗಳಲ್ಲಿ 134 ಪುರುಷರ ಪದಕ ಸ್ಪರ್ಧೆಗಳು ಮತ್ತು 136 ಮಹಿಳೆಯರ ಪದಕ ಸ್ಪರ್ಧೆಗಳು ನಡೆಯಲಿದೆ. ಇದನ್ನೂ ಓದಿ: ಗಿಲ್, ಚಹಲ್ ಆಟಕ್ಕೆ ದಕ್ಕಿದ ಜಯ – ವೆಸ್ಟ್ ಇಂಡೀಸ್‍ನಲ್ಲಿ ಚೊಚ್ಚಲ ಬಾರಿಗೆ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ
Advertisement
Advertisement
ಈ ಹಿಂದೆ ನೀರಜ್ ಚೋಪ್ರಾ ಧ್ವಜಧಾರಿಯಾಗಲಿದ್ದಾರೆ ಎನ್ನಲಾಗಿತ್ತು. ಗಾಯದ ಕಾರಣ ಕಾಮನ್‍ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಕಾರಣ ಪಿ.ವಿ ಸಿಂಧು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಮೂಲಕ ಪಿ.ವಿ ಸಿಂಧು ಎರಡನೇ ಬಾರಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ. 2018ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಪಿ.ವಿ ಸಿಂಧು ಧ್ವಜಧಾರಿಯಾಗಿದ್ದರು. ಇದನ್ನೂ ಓದಿ: ಬಿಸಿಸಿಐ ಶೀರ್ಷಿಕೆ ಪ್ರಾಯೋಜಕ ಪಡೆದುಕೊಂಡ ಮಾಸ್ಟರ್ ಕಾರ್ಡ್ – ಪ್ರತಿ ಪಂದ್ಯಕ್ಕೆ ಸಿಗುತ್ತೆ ಕೋಟಿ ಕೋಟಿ
Advertisement
ಉದ್ಘಾಟನಾ ಸಮಾರಂಭ ಇಂಗ್ಲೆಂಡ್‍ನ ಬರ್ಮಿಂಗ್ ಹ್ಯಾಮ್‍ನಲ್ಲಿರುವ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭಕ್ಕೆ ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ಕಾಲಮಾನ ಇಂದು ರಾತ್ರಿ 11 ಗಂಟೆಯಿಂದ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಲಿದೆ.
ಕಾಮನ್‍ವೆಲ್ತ್ ಕ್ರೀಡಾಕೂಟ ಯಾರಿಗೆಲ್ಲ ಅವಕಾಶ:
ಕಾಮನ್‌ವೆಲ್ತ್ ಕ್ರೀಡಾಕೂಟ 1930 ರಲ್ಲಿ ಪ್ರಾರಂಭವಾಗಿ ಪ್ರತೀ ನಾಲ್ಕು ವರ್ಷಕ್ಕೆ ಒಮ್ಮೆ ಈ ಕ್ರೀಡಾ ಕಾರ್ಯಕ್ರಮ ನಡೆಯುತ್ತದೆ. ಜಗತ್ತಿನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಮತ್ತು ಏಷ್ಯನ್ ಗೇಮ್ಸ್ ಗಳನ್ನು ಹೊರತು ಪಡಿಸಿದರೆ ಮೂರನೇಯ ದೊಡ್ಡ ಕ್ರೀಡಾ ಕೂಟ. ಇದು ಹಿಂದೆ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟ ದೇಶಗಳು ಹಾಗೂ ಈಗಲೂ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟ ದೇಶಗಳಿಗೆ ಮಾತ್ರ ಸೀಮಿತವಾಗಿದೆ. ಕಾಮನ್‍ವೆಲ್ತ್ ಕ್ರೀಡಾಕೂಟವು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತದೆ. ಕಾಮನ್‍ವೆಲ್ತ್ ಒಕ್ಕೂಟ ಸದಸ್ಯ ರಾಷ್ಟ್ರಗಳು ಮಾತ್ರ ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತವೆ. ಇದೀಗ ಕಾಮನ್‍ವೆಲ್ತ್ ಒಕ್ಕೂಟದಲ್ಲಿ 56 ಸದಸ್ಯ ರಾಷ್ಟ್ರಗಳಿವೆ. ಇದಲ್ಲದೆ ಒಲಿಂಪಿಕ್ಸ್‌ನಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸದ ಇತರ ಪ್ರಾಂತ್ಯಗಳಿಗೂ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅದರಂತೆ ಈ ಬಾರಿ 5 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಕೂಟದಲ್ಲಿ ಭಾಗವಹಿಸಲಿದ್ದಾರೆ. ಇಂದಿನಿಂದ ಆರಂಭಗೊಳ್ಳುವ ಕಾಮನ್‍ವೆಲ್ತ್ ಗೇಮ್ಸ್‌ಗೆ ಆಗಸ್ಟ್ 8 ರಂದು ತೆರೆಬೀಳಲಿದೆ.
2018ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ ಒಟ್ಟು 66 ಪದಕ ಗೆದ್ದಿತ್ತು. ಈ ಮೂಲಕ ಪದಕ ಪಟ್ಟಿಯಲ್ಲಿ ಟಾಪ್-5 ರಲ್ಲಿ ಸ್ಥಾನ ಸಂಪಾದಿಸಿತ್ತು. ಈ ಬಾರಿ ಕೂಡ ಪದಕ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದ್ದು, ಈ ಬಾರಿ ಟಿ20 ಮಾದರಿಯ ಮಹಿಳಾ ಕ್ರಿಕೆಟ್ ಕೂಡ ಸೇರಿಕೊಂಡಿದ್ದು ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ಪದಕ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇದರೊಂದಿಗೆ ಹಲವು ಅಥ್ಲೀಟ್‍ಗಳ ಮೇಲೆ ಪದಕದ ನಿರೀಕ್ಷೆ ಇರಿಸಲಾಗಿದೆ.