ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ 57ಕೆಜಿ ವಿಭಾಗದ ಕುಸ್ತಿಯಲ್ಲಿ ಭಾರತದ ಕುಸ್ತಿ ಪಟು ಅಂಶು ಮಲಿಕ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಮಹಿಳೆಯರ 57 ಕೆಜಿ ವಿಭಾಗದ ಕುಸ್ತಿ ಫೈನಲ್‍ನಲ್ಲಿ ಅಂಶು ಮಲಿಕ್ ವಿರುದ್ಧ ನೈಜೀರಿಯಾದ ಒಡುನಾಯೊ ಫೋಲಸಾಡೆ 4-6 ಅಂತರದಲ್ಲಿ ಗೆದ್ದು ಚಿನ್ನದ ಪದಕ ಪಡೆದರು. ಇತ್ತ ಬೆಳ್ಳಿ ಪದಕ ವಿಜೇತೆ ಅಂಶು ಮಲಿಕ್ ಕುಸ್ತಿಯಲ್ಲಿ ಪದಕದ ಬೇಟೆಗೆ ಆರಂಭ ನೀಡಿದ್ದಾರೆ. ಈ ಮೂಲಕ ಭಾರತ ತಂಡ ಈವರೆಗೆ 2022ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 6 ಚಿನ್ನ, 8 ಬೆಳ್ಳಿ, 7 ಕಂಚು ಸೇರಿ ಒಟ್ಟು 21 ಪದಕ ಗೆದ್ದಂತಾಗಿದೆ. ಇದನ್ನೂ ಓದಿ: CWG 2022: ಚಿನ್ನದ ಪದಕ ಗೆಲ್ಲೋವರೆಗೆ ನನಗೆ ವಿಶ್ರಾಂತಿ ಇಲ್ಲ – ರಜತ ವಿಜೇತೆ ತುಲಿಕಾ ಮಾನ್
ಇದಲ್ಲದೇ ಮೂವರು ಕುಸ್ತಿಪಟುಗಳಾದ ಬಜರಂಗ್ ಪುನಿಯಾ (ಪುರುಷರ 65 ಕೆಜಿ), ಸಾಕ್ಷಿ ಮಲಿಕ್ (ಮಹಿಳೆಯರ 62 ಕೆಜಿ) ಮತ್ತು ದೀಪಕ್ ಪುನಿಯಾ (ಪುರುಷರ 86 ಕೆಜಿ) ಫೈನಲ್‍ಗೆ ತಲುಪಿದ್ದು ಚಿನ್ನದ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ. ಇದನ್ನೂ ಓದಿ: Commonwealth Games: 44 ವರ್ಷಗಳ ಬಳಿಕ ಬೆಳ್ಳಿ ಗೆದ್ದು ಸಾಧನೆ ಮಾಡಿದ ಮುರಳಿ