LatestLeading NewsMain PostNationalSports

ನನ್ನ ತಪ್ಪುಗಳಿಂದ ರಾಷ್ಟ್ರಗೀತೆ ಮೊಳಗಲಿಲ್ಲ – ಅದು ತಪ್ಪಲ್ಲ ಕ್ಷಮೆ ಕೇಳುವ ಅಗತ್ಯವಿಲ್ಲ: ಮೋದಿ

ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು 40ಕ್ಕೂ ಹೆಚ್ಚು ಪದಕ ಗೆದ್ದು ಕೀರ್ತಿ ಪತಾಕೆ ಹಾರಿಸಿದ್ದಾರೆ. ಈ ನಡುವೆ ಕುಸ್ತಿಯಲ್ಲಿ ಚಿನ್ನದ ಪದಕ ಗೆಲ್ಲಲು ವಿಫಲವಾದ ಪೂಜಾ ಗೆಹ್ಲೋಟ್ ಆಡಿದ ಬೇಸರದ ನುಡಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಧಾನದ ಮಾತುಗಳಿಂದ ಕ್ರೀಡಾಪಟುವಿಗೆ ಧೈರ್ಯ ತುಂಬಿದ್ದಾರೆ.

ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಪೂಜಾ ಗೆಹ್ಲೋಟ್ ಸ್ಕಾಟ್ಲೆಂಡ್‍ನ ಕ್ರಿಸ್ಟೆಲ್ಲೆ ಲೆಮೊಫ್ಯಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದರು. ಆ ಬಳಿಕ ಸಂಭ್ರಮ ಹಂಚಿಕೊಳ್ಳುತ್ತ ಪೂಜಾ ಗೆಹ್ಲೋಟ್, ನಾನು ನನ್ನ ದೇಶವಾಸಿಗಳೊಂದಿಗೆ ಕ್ಷಮೆಯಾಚಿಸುತ್ತೇನೆ. ವಿಜಯ ವೇದಿಕೆಯಲ್ಲಿ ನಾನಿರುವಾಗ ನಮ್ಮ ದೇಶದ ರಾಷ್ಟ್ರಗೀತೆ ಮೊಳಗಬೇಕೆಂದು ನಾನು ಬಯಸಿದ್ದೆ. ಆದರೆ ನನ್ನ ತಪ್ಪುಗಳಿಂದ ಈ ಅವಕಾಶ ಸಿಗಲಿಲ್ಲ. ಈ ಸೋಲಿನಿಂದ ಪಾಠ ಕಲಿತು ಮುಂದೆ ಮುನ್ನಡೆಯುತ್ತೇನೆ ಎಂದಿದ್ದರು. ಇದನ್ನೂ ಓದಿ: ಇದು ಯಾವ್ ಶಾಟ್ ಗುರು – ಪಂತ್ ಕಾಲೆಳೆದ ನೆಟ್ಟಿಗರು

ಪೂಜಾ ಗೆಹ್ಲೋಟ್ ಆಡಿದ ಈ ಮಾತುಗಳನ್ನು ಕೇಳಿಸಿಕೊಂಡ ಬಳಿಕ ಮೋದಿ, ನಿಮ್ಮ ಪದಕವು ದೇಶದ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ನೀವು ಕ್ಷಮೆ ಕೇಳುವ ಅಗತ್ಯವಿಲ್ಲ. ನಿಮ್ಮ ಜೀವನ ಪಯಣ ನಮ್ಮನ್ನು ಪ್ರೇರೇಪಿಸುತ್ತದೆ, ನಿಮ್ಮ ಯಶಸ್ಸು ನಮಗೆ ಸಂತೋಷವನ್ನು ನೀಡುತ್ತದೆ. ನೀವು ಮುಂದೆ ಮಹತ್ತರವಾದ ಗುರಿ ಹೊಂದಿದ್ದೀರಿ. ಮುಂದಿನ ದಿನಗಳಲ್ಲೂ ಇದೇ ರೀತಿ ಹೊಳೆಯುತ್ತಿರಿ ಎಂದು ಟ್ವಿಟ್ಟರ್ ಮೂಲಕ ಪೂಜಾ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಸಿಕ್ಸ್‌ ಸಿಡಿಸಿ ಅಫ್ರಿದಿಯನ್ನು ಹಿಂದಿಕ್ಕಿದ ಹಿಟ್‌ಮ್ಯಾನ್‌ – ಭಾರತಕ್ಕೆ ಸರಣಿ ಜಯ

ಬರ್ಮಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಭರ್ಜರಿ ಪದಕ ಬೇಟೆಯಾಡಿದ್ದಾರೆ. ಈವರೆಗೆ 13 ಚಿನ್ನ, 11 ಬೆಳ್ಳಿ, 16 ಕಂಚು ಸೇರಿ ಒಟ್ಟು 40 ಪದಕ ಗೆದ್ದಿದ್ದಾರೆ. 10ನೇ ದಿನವಾದ ಇಂದು ಇನ್ನಷ್ಟು ಪದಕ ಗೆಲ್ಲುವ ಸಾಧ್ಯತೆ ಇದೆ.

Live Tv

Leave a Reply

Your email address will not be published.

Back to top button