ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಲಾನ್ ಬಾಲ್ಸ್ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಭಾರತ ಚಿನ್ನದ ಪದಕನ್ನು ಗೆದ್ದುಕೊಂಡಿದೆ.
ಲೌಲಿ ಚೌಬೆ, ಪಿಂಕಿ, ನಯನ್‌ಮೊನಿ ಸೈಕಿಯಾ ಹಾಗೂ ರೂಪಾ ರಾಣಿ ತಿರ್ಕೆ ಅವರನ್ನೊಳಗೊಂಡ ತಂಡವು ದಕ್ಷಿಣ ಆಫ್ರಿಕಾವನ್ನು 17-10 ಅಂತರದಿಂದ ಸೋಲಿಸಿ ಚಿನ್ನ ಗೆದ್ದಿದೆ. ಇದನ್ನೂ ಓದಿ: Commonwealth Games: ಟಾಪ್-10 ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ
Advertisement
Advertisement
ಸೆಮಿಫೈನಲ್‌ನಲ್ಲಿ ವಿಶ್ವದ 2ನೇ ಶ್ರೇಯಾಂಕಿತ ಲಾನ್ ಬಾಲ್ಸ್ ತಂಡವೆನಿಸಿಕೊಂಡಿದ್ದ ನ್ಯೂಜಿಲೆಂಡ್ ತಂಡವನ್ನು ಟೀಂ ಇಂಡಿಯಾ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಇದನ್ನೂ ಓದಿ: Commonwealth Games: ಆಂಗ್ಲರ ವಿರುದ್ಧ ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತದ ಹಾಕಿ ತಂಡ