CrimeLatestLeading NewsMain PostNational

ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?

ನವದೆಹಲಿ: ರಾಮನವಮಿ ಆಚರಣೆಯ ವೇಳೆ ಭಾನುವಾರ ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುತ್ತಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಮು ಸಂಘರ್ಷ ಏರ್ಪಟ್ಟಿದೆ. ಇದೇ ವೇಳೆ 10 ಮಂದಿ ಗಾಯಗೊಂಡಿದ್ದು, ಓರ್ವ ಮೃತಪಟ್ಟಿದ್ದಾನೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಮಧ್ಯಪ್ರದೇಶದ ಖರ್ಗಾನ್‌ನ ಕೆಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ರಾಮ ನವಮಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ಮತ್ತು ಗಲಭೆ ನಡೆದಿದೆ. ಅನೇಕ ಕಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸಂಘರ್ಷ ಭುಗಿಲೇಳುವುದನ್ನು ತಡೆಯಲು ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ವಿವಿ ಆವರಣದಲ್ಲಿ ರಾಮನವಮಿ ಆಚರಿಸ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

FIRE

ಧ್ವನಿವರ್ಧಕ ವಿಚಾರಕ್ಕೆ ಗಲಾಟೆ: ಧ್ವನಿವರ್ಧಕಗಳಿಂದ ಸಂಗೀತ ಪ್ರಸಾರ ಮಾಡುತ್ತಿದ್ದ ವಿಚಾರವಾಗಿ ನಡೆದ ಜಗಳದ ಬಳಿಕ ತಲಬ್ ಚೌಕ್‌ನಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಘರ್ಷಣೆ ಶುರುವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯುಗಳನ್ನು ಸಿಡಿಸಬೇಕಾಯಿತು ಎಂದು ಹೆಚ್ಚುವರಿ ಕಲೆಕ್ಟರ್ ಎಸ್.ಎಸ್.ಮುಜಾಲ್ದೆ ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

ದೇವಸ್ಥಾನ ಧ್ವಂಸ, ಮನೆಗಳಿಗೆ ಬೆಂಕಿ: ಘಟನೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಎಸ್‌ಪಿ ಸಿದ್ಧಾರ್ಥ್ ಚೌಧರಿ ಸೇರಿದಂತೆ ಅನೇಕ ಪೊಲೀಸರು ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಒಂದು ದೇವಸ್ಥಾನ ಧ್ವಂಸಗೊಳಿಸಿ, 4 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ದೃಶ್ಯಗಳು ವೀಡಿಯೋಗಳಲ್ಲಿ ಸೆರೆಯಾಗಿವೆ.

crime

ಗುಜರಾತ್‌ನಲ್ಲಿ ಕಲ್ಲುತೂರಾಟ: ಗುಜರಾತ್‌ನ ಆನಂದ್ ಜಿಲ್ಲೆಯ ಕಂಭಾಟ್ ಮತ್ತು ಸಬರ್ಕಾಂತಾ ಜಿಲ್ಲೆಯ ಹಿಮ್ಮತ್ ನಗರದಲ್ಲಿ ಸಂಘರ್ಷದ ವೇಳೆ ಕಲ್ಲು ತೂರಾಟ ಹಾಗೂ ಬೆಂಕಿ ಹಚ್ಚಿರುವ ಘಟನೆಗಳು ನಡೆದಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್ ಪ್ರಯೋಗ ಮಾಡಿದ್ದಾರೆ.

ಗುಂಪು ಘರ್ಷಣೆ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಜಾಗದಲ್ಲಿ ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎಂದು ಕಂಭಾಟ್ ಪೊಲೀಸ್ ವರಿಷ್ಠಾಧಿಕಾರಿ ಅಜೀತ್ ರಜ್ಯಾನ್ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

ಹಿಮ್ಮತ್ ನಗರದಲ್ಲಿ ಗುಂಪೊಂದು ಕೆಲವು ವಾಹನಗಳು ಮತ್ತು ಅಂಗಡಿಗಳಿಗೆ ಹಾನಿ ಮಾಡಿದೆ. ರಾಮನವಮಿ ಆಚರಣೆ ವೇಳೆ ಕೆಲವರಿಗೆ ಕಲ್ಲೇಟು ಬಿದ್ದಿದೆ ಎಂದು ಸಬರ್ಕಾಂತಾ ಪೊಲೀಸ್ ಮುಖ್ಯಸ್ಥ ವಿಶಾಲ್ ವಾಘೇಲಾ ಹೇಳಿದ್ದಾರೆ.

RAMANAVAMI
ಸಾಂದರ್ಭಿಕ ಚಿತ್ರ

ಪೊಲೀಸರ ಮೇಲೆ ದಾಳಿ ಆರೋಪ: ಪಶ್ಚಿಮ ಬಂಗಾಳದ ಹೌರಾದಲ್ಲಿ ಶಿಬ್‌ಪುರ್ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆಗಳು ವರದಿಯಾಗಿದ್ದು, ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ರಾಮನವಮಿ ಮೆರವಣಿಗೆ ಮೇಲೆ ಪೊಲೀಸರೇ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮೆರವಣಿಗೆಯಲ್ಲಿ ತೆರಳುತ್ತಿದ್ದ ಜನರ ಮೇಲೆ ಪೊಲೀಸ್ ಸಿಬ್ಬಂದಿ ಮನಬಂದಂತೆ ಪ್ರಹಾರ ನಡೆಸಿದ್ದಾರೆ ಎಂದು ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ

RAMANAVAMI

ಹೌರಾದ ನಿವಾಸಿಗಳು ಸಾಮಾಜಿಕ ಮಾಧ್ಯಮದಲ್ಲಿ ಏನನ್ನಾದರೂ ಬಿತ್ತರಿಸುವಾಗ ಸಂಯಮ ಕಾಪಾಡಿಕೊಳ್ಳಿ ಹಾಗೂ ಯಾವುದೇ ನಕಲಿ ಸುದ್ದಿಗಳನ್ನು ಹರಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜಾರ್ಖಂಡ್‌ನ ಲೊಹರ್ದಗಾದಲ್ಲಿ ಕೂಡ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಹಾಗೂ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಶಾಂತಿ ಕಾಪಾಡಲು ಬೃಹತ್ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಲಾಗಿದೆ.

Leave a Reply

Your email address will not be published.

Back to top button