ಗಾಂಧೀನಗರ: ಗುಜರಾತ್‍ನ ಭುಜ್‍ನಲ್ಲಿ ಸ್ಥಳೀಯ ವ್ಯಕ್ತಿಯೊಬ್ಬನ ಹತ್ಯೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಇದಕ್ಕೂ ಮುನ್ನವೇ ಈ ಹಿಂಸಾಚಾರ ಕೃತ್ಯ ನಡೆದಿದೆ.
Advertisement
ಭುಜ್‍ನ ಮಾದಾಪುರ ಪ್ರದೇಶದಲ್ಲಿ ಹಾಲು ಮಾರಾಟ ಮಾಡುತ್ತಿದ್ದ ಯುವಕನನ್ನು ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆಯೇ, ರೊಚ್ಚಿಗೆದ್ದ ಗುಂಪುಗಳು ಬೀದಿಗಿಳಿದು ಮಸೀದಿ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಿದೆ. ಇದೀಗ ಪರಿಸ್ಥಿತಿ ಹತೋಟಿಗೆ ತಂದು ಶಾಂತಿ ಸುವ್ಯವಸ್ಥೆ ಕಾಪಾಡಲು ಹಿರಿಯ ಅಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ವಿಶ್ವದ ಜನಪ್ರಿಯ ನಾಯಕರ ನಾಯಕರಲ್ಲಿ ಮೋದಿ ನಂಬರ್ 1
Advertisement
Advertisement
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಬ್ಬಿಸುವವರಿಗೆ ಕಿವಿ ಕೊಡದೆ ಜನರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕೋಮು ಗಲಭೆಯ ಹಿನ್ನೆಲೆ ಇದೀಗ ಪೊಲೀಸರು ಎರಡೂ ಗುಂಪುಗಳ ಮೇಲೆ ದೂರು ದಾಖಲಿಸಿಕೊಂಡಿದ್ದು, ಸದ್ಯ ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಭಾರತದಲ್ಲೇ ಮೊದಲ ಬಾರಿಗೆ ತಯಾರಾಯ್ತು ಎಕೆ-630ನ ಮದ್ದುಗುಂಡು