ನವದೆಹಲಿ: ಭಾರತದಲ್ಲಿ ಮುಸ್ಲಿಮರನ್ನು (Muslims) ಗುರಿಯಾಗಿಸಿ ಹಿಂಸಾಚಾರ ನಡೆಸಲಾಗುತ್ತಿದೆ ಎಂಬ ಇಸ್ಲಾಮಿಕ್ ರಾಷ್ಟ್ರಗಳ (Islamic Nations) ಆರೋಪವನ್ನು ಭಾರತ ತಳ್ಳಿಹಾಕಿದೆ. ಇಸ್ಲಾಮಿಕ್ ರಾಷ್ಟ್ರಗಳು ಕೋಮುವಾದಿ ಮನಸ್ಥಿತಿಯಿಂದ ಹೇಳಿಕೆ ನೀಡುತ್ತಿವೆ. ಭಾರತ ವಿರೋಧಿ ಅಜೆಂಡಾ ಹೊಂದಿವೆ ಎಂದು ಕಿಡಿಕಾರಿದೆ.
ಭಾರತ (India) ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಇಸ್ಲಾಮಿಕ ರಾಷ್ಟ್ರಗಳು, ಭಾರತದ ಘನತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಕಾಂಗ್ರೆಸ್ ಶಾಸಕನಿಂದ ಬ್ಯಾಂಕ್ ಸಿಬ್ಬಂದಿಗೆ ಕಪಾಳಮೋಕ್ಷ
ರಾಮನವಮಿ ಆಚರಣೆ ಸಂದರ್ಭದಲ್ಲಿ ಹಲವಾರು ರಾಜ್ಯಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಹಿಂಸಾಚಾರ ನಡೆಸಲಾಗಿದೆ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ (OIC) ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದರು.
ಭಾರತದ ವಿರುದ್ಧ ದುರುದ್ದೇಶಪೂರಿತ ಪ್ರಚಾರದಲ್ಲಿ ತೊಡಗಿರುವ ಇಸ್ಲಾಮಿಕ್ ಸಹಕಾರ ಸಂಘಟನೆ ತನ್ನ ನೀಚ ಅಜೆಂಡಾವನ್ನು ಅಭಿವ್ಯಕ್ತಪಡಿಸುತ್ತಿದೆ ಎಂದು ಮಾ.31ರಂದು ಜಿನೀವಾದಲ್ಲಿ ಮಾನವ ಹಕ್ಕುಗಳ ಮಂಡಳಿಯಲ್ಲಿ ಭಾರತದ ಕಾಯಂ ಮಿಷನ್‌ನ ಮೊದಲ ಕಾರ್ಯದರ್ಶಿ ಸೀಮಾ ಪೂಜಾನಿ ಟೀಕಿಸಿದ್ದರು. ಇದನ್ನೂ ಓದಿ: ಶೀಘ್ರವೇ ನಮ್ಮ ನಾಯಕರ ಮೇಲೆ ಐಟಿ, ಇಡಿ ದಾಳಿ ನಡೆಯಲಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ
ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣವಾಗಿ ಭಾರತದ ಭಾಗವಾಗಿವೆ. ಪಾಕಿಸ್ತಾನವು ಭಾರತದ ಭೂಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು.