ಬಾಗಲಕೊಟೆ: ಅನ್ಯ ಕೋಮಿನ ಯುವಕರ ನಡುವೆ ನಡೆದ ಘರ್ಷಣೆಯಲ್ಲಿ ಮೂವರಿಗೆ ಗಾಯಗಳಾದ ಘಟನೆ ಬಾದಾಮಿ ತಾಲೂಕಿನ ಕೆರೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಘಟನೆಯಲ್ಲಿ ಅರುಣ್, ಲಕ್ಷ್ಮಣ್, ಯಮನೂರು ಎಂಬುವರಿಗೆ ಗಾಯಗಳಾಗಿವೆ. ನೂಪುರ್ ಶರ್ಮಾ ಪರ-ವಿರೋಧ ವಿಚಾರವಾಗಿಯೇ ಬಾಗಲಕೋಟೆಯ ಕೇರೂರಿನಲ್ಲಿ ಗುಂಪು ಘರ್ಷಣೆ ನಡೆದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬರು ನೂಪುರ್ ವಿರುದ್ಧ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಶುರುವಾದ ಜಗಳ ಕೋಮು ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.
Advertisement
Advertisement
ಅರುಣ್ ಕಟ್ಟಿಮನಿ ಸೇರಿ ಆತನ ಸ್ನೇಹಿತರು ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಅರುಣ್ ಬೆನ್ನಿಗೆ ಚೂರಿ ಹಾಕಿದ್ದಾರೆ. ತಕ್ಷಣವೇ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಶಾಸಕ ಜಮೀರ್ ಅಹ್ಮದ್ ಆಸ್ತಿ ಶೇ.2031ರಷ್ಟು ಹೆಚ್ಚಳ!
Advertisement
ಈ ಘಟನೆಯಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಕೆರೂರು ಪಟ್ಟಣದ ಬಸ್ ನಿಲ್ದಾಣದ ಮುಂದಿನ ಎರಡು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿ, ಐದು ಬೈಕ್‍ಗಳನ್ನು ಜಖಂಗೊಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ತರಕಾರಿ ಅಂಗಡಿಗಳನ್ನು ಧ್ವಂಸ ಮಾಡಿದರು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
Advertisement
ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಕೆರೂರು ಪಟ್ಟಣಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಾಳೆ ರಾತ್ರಿ 8 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಗೂಡಂಗಡಿ ಸೇರಿದಂತೆ ಎಲ್ಲ ತರಹದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ನಾಳೆವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆ
ಇದೇ ವೇಳೆ ಹಲ್ಲೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ತಲೆಗೆ ಹೊಡೆದವರ ತಲೆ ತೆಗೆಯೋದಕ್ಕೂ ಹಿಂಜರಿಯಲ್ಲ ಎಂದು ಹಿಂದೂ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಘಟನೆ ಸಂಬಂಧ ಘರ್ಷಣೆಗೆ ಕಾರಣರಾದವರಿಗಾಗಿ ಪೊಲೀಸರು ಶೋಧ ನಡೆಯುತ್ತಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.