– ನಿಷೇಧಾಜ್ಞೆ ಉಲ್ಲಂಘಿಸಿ ಬಿಜೆಪಿ ಪ್ರತಿಭಟನೆಗೆ ನಿರ್ಧಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮು ಗಲಭೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಶಾಂತಿ ಸಭೆ ಕರೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಜಿಲ್ಲೆಯ ಸಂಸದರು, ಶಾಸಕರು, ವಿವಿಧ ಧರ್ಮಗಳ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದೆ.
Advertisement
ಆದ್ರೆ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಆರೋಪಿಗಳನ್ನ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಶಾಂತಿ ಸಭೆಯನ್ನು ಬಹಿಷ್ಕರಿಸಿದೆ. ಇತ್ತ ಜಿಲ್ಲೆಯಲ್ಲಿ ಆರ್‍ಎಸ್‍ಎಸ್ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಇವತ್ತು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಇವತ್ತು ಬೆಳಗ್ಗೆ ಮಂಗಳೂರಲ್ಲಿ ಪ್ರತಿಭಟನೆ ನಡೆಯಲಿದೆ.
Advertisement
Advertisement
ಆದ್ರೆ ಕೋಮುಗಲಭೆ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ನಿಷೇಧಾಜ್ಞೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ನಗರದ ಟೌನ್‍ಹಾಲ್ ಮುಂಭಾಗದಲ್ಲಿ ನಡೆಸಲು ಉದ್ದೇಶಿಸಿರುವ ಬಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಇವತ್ತಿನ ಹೋರಾಟದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಶರತ್ ಮಡಿವಾಳ ಸಾವಿನ ಹಿಂದಿನ ದಿನ ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್‍ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ನಿಷೇಧಾಜ್ಞೆಯಿದ್ದರೂ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಿದ್ದರ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಪೊಲೀಸರ ವಿರುದ್ಧ ಗರಂ ಆಗಿದ್ದರು.