ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ವಿಭಜನೆ ಬಿಕ್ಕಟ್ಟನ್ನು ಪರಿಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ತಾಕೀತು ಮಾಡಿದ್ದಾರೆ.
ಜಾತ್ರೆ, ಉತ್ಸವ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಬಲಪಂಥೀಯ ಗುಂಪುಗಳ ನೀಡಿರುವ ಕರೆಗೆ ಸಂಬಂಧಿಸಿದಂತೆ ಕಿರಣ್ ಮಜುಂದಾರ್-ಶಾ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ತಂತ್ರಜ್ಞಾನ ಕ್ಷೇತ್ರವು ಕೋಮುವಾದಿಯಾದರೆ ಅದು ಭಾರತದ ಜಾಗತಿಕ ನಾಯಕತ್ವವನ್ನು ನಾಶ ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ, RSS, VHP, ಬಜರಂಗದಳವಲ್ಲ: ಹೆಚ್.ವಿಶ್ವನಾಥ್ ಕಿಡಿ
Advertisement
Advertisement
ಟ್ವೀಟ್‌ನಲ್ಲೇನಿದೆ?
ಎಲ್ಲಾ ಸಮುದಾಯಗಳನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕ ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು. ಐಟಿಬಿಟಿ ಯಂತಹ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ. ಬಸವರಾಜ ಬೊಮ್ಮಾಯಿ ಅವರೇ, ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ ಎಂದು ಟ್ವೀಟ್ ಮಾಡಿ ಕಿರಣ್ ಮಜುಂದಾರ್ ಅವರು ಒತ್ತಾಯಿಸಿದ್ದಾರೆ.
Advertisement
Karnataka has always forged inclusive economic development and we must not allow such communal exclusion- If ITBT became communal it would destroy our global leadership. @BSBommai please resolve this growing religious divide???? https://t.co/0PINcbUtwG
— Kiran Mazumdar-Shaw (@kiranshaw) March 30, 2022
Advertisement
ಬೊಮ್ಮಾಯಿ ಮತ್ತು ಕಿರಣ್ ಶಾ ಅವರಿಗೆ ಟ್ಯಾಗ್ ಮಾಡಿ ವ್ಯಕ್ತಿಯೊಬ್ಬ, ಬೊಮ್ಮಾಯಿ ಅವರು ಕೋಮುಗಳ ನಡುವಿನ ವಿಭಜನೆಯನ್ನು ಹೆಚ್ಚಿಸುತ್ತಾರೆ. ನಮ್ಮ ಕಣ್ಣೆದುರೇ ಕರ್ನಾಟಕ ಬಿಕ್ಕಟ್ಟು ಬಗೆಹರಿಸುವಲ್ಲಿ ವಿಫಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಹಲಾಲ್ ಧಾರ್ಮಿಕ ಆಚರಣೆ, ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್
ಇದಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ಶಾ ಅವರು, ನಮ್ಮ ಮುಖ್ಯಮಂತ್ರಿಗಳು ಪ್ರಗತಿಪರ ನಾಯಕ. ಈ ಬಿಕ್ಕಟ್ಟನ್ನು ಅವರು ಪರಿಹರಿಸುತ್ತಾರೆಂಬ ಭರವಸೆಯಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.