ಬೆಂಗಳೂರು: ಕರಾವಳಿಯಲ್ಲಿ ಕೋಮು ದ್ವೇಷಕ್ಕೆ (Communial Murder) ಬಲಿಯಾದ ನಾಲ್ಕು ಜನರ ಕುಟುಂಬಕ್ಕೆ ಕರ್ನಾಟಕ ಸರ್ಕಾರ (Karnataka Government) ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಸರ್ಕಾರ ಈ ಪರಿಹಾರವನ್ನು ಘೋಷಿಸಿದೆ. ಇದನ್ನೂ ಓದಿ: ಊರಿಗೆ ಹೋಗೋಣವೆಂದು ಕರ್ಕೊಂಡು ಬಂದು ಮಕ್ಕಳೆದುರೇ ದಾರಿ ಮಧ್ಯೆ ಪತ್ನಿಯನ್ನ ಹೊಡೆದು ಕೊಂದ!
Advertisement
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ನಾಲ್ವರು ಹತ್ಯೆಗೀಡಾಗಿದ್ದರು. ಈ ನಾಲ್ವರ ಕುಟುಂಬಗಳಿಗೆ ಪರಿಹಾರ ಘೋಷಣೆ ಆಗಿರಲಿಲ್ಲ. ಈಗ ಈ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ (Chief Minister Relief Fund) ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
Advertisement
Advertisement
2022ರ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, 2022ರ ಡಿಸೆಂಬರ್ 24ರಂದು ಅಬ್ದುಲ್ ಜಲೀಲ್, 2018ರ ಜನವರಿ 3 ರಂದು ದೀಪಕ್ ರಾವ್ ಹತ್ಯೆಯಾಗಿತ್ತು. ಈ ಮಧ್ಯೆ ಹಂತಕರಿಂದ ಹತ್ಯೆಗಾಗಿದ್ದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಆಗಿನ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು.
Advertisement
2018ರ ಚುನಾವಣೆಯ ಪ್ರಚಾರ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಗೆ ಆಗಮಿಸಿದ್ದ ಗೃಹ ಸಚಿವ ಅಮಿತ್ ಶಾ ಅವರು ಅಂದು ಕೊಲೆಯಾಗಿದ್ದ ದೀಪಕ್ ರಾವ್ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ ಗೃಹ ಸಚಿವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಇದನ್ನೂ ಓದಿ: ವಿಸ್ಕಿ ಬಾಟ್ಲಿಯಲ್ಲಿ 13 ಕೋಟಿ ರೂ. ಮೌಲ್ಯದ ಕೊಕೇನ್- ಕೀನ್ಯಾ ಮಹಿಳೆ ಅರೆಸ್ಟ್