LatestMain PostNational

ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರ ಹಿಂದೂ ದೇಗುಲವನ್ನು ವಶಪಡಿಸಿಕೊಳ್ತಿದೆ: ಸುಪ್ರಿಂಕೋರ್ಟ್ ಮಾಜಿ ಜಡ್ಜ್ ವೀಡಿಯೋ ವೈರಲ್

ನವದೆಹಲಿ: ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾಧೀಶರೊಬ್ಬರು ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರಗಳು ಹಿಂದೂ ದೇವಾಲಯಗಳನ್ನು ವಶಪಡಿಸಿಕೊಳ್ಳುತ್ತವೆ ಎಂದು ಹೇಳಿರುವ ವೀಡಿಯೋಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

SUPREME COURT

ಕೇರಳದ ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತದ ವಿಚಾರವಾಗಿ 2020ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರ ಪೀಠವು ನೀಡಿದ ತೀರ್ಮಾನವನ್ನು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಎಂತಹ ರೋಚಕ ಪಂದ್ಯ – ಪಾಕ್ ಮಣಿಸಿದ ಭಾರತಕ್ಕೆ ರಾಹುಲ್ ವಿಶ್

ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಇಂದು ಮಲ್ಹೋತ್ರಾ ಅವರು, ಈ ಕಮ್ಯುನಿಸ್ಟ್ ಸರ್ಕಾರಗಳದ್ದು ಇದೇ ಗೋಳಾಗಿದೆ. ಆದಾಯಕ್ಕಾಗಿ ಅಧಿಕಾರ ಪಡೆದುಕೊಳ್ಳಲು ಬಯಸುತ್ತಾರೆ. ಅವರ ಮುಖ್ಯ ಸಮಸ್ಯೆ ಆದಾಯವಾಗಿದೆ. ಅದರಲ್ಲಿಯೂ ಹಿಂದೂ ದೇವಾಲಯಗಳನ್ನು ಮಾತ್ರ ವಶಪಡಿಸಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೆ ನ್ಯಾಯಮೂರ್ತಿ ಲಲಿತ್ ಹಾಗೂ ನಾನು ಅವಕಾಶ ನೀಡುವುದಿಲ್ಲ ಎಂದು ಜನರ ಗುಂಪಿನ ಮಧ್ಯೆ ನಿಂತುಕೊಂಡು ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಇದೇ ವೇಳೆ ಮಹಿಳೆಯೊಬ್ಬರು ನಿಮ್ಮ ಬಗ್ಗೆ ನಮಗೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಂದು ಮಲ್ಹೋತ್ರಾ ಧನ್ಯವಾದ ತಿಳಿಸಿದ್ದಾರೆ.

ಕೇರಳ ರಾಜ್ಯದ ತಿರುವನಂತಪುರದಲ್ಲಿರುವ ಪ್ರಖ್ಯಾತ ಪದ್ಮನಾಭ ಸ್ವಾಮಿ ದೇಗುಲದ ಆಸ್ತಿ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಹಿಡಿತ ಸಾಧಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇರಳ ಹೈಕೋರ್ಟ್ 2011ರ ತೀರ್ಪನ್ನು ತಳ್ಳಿ ಹಾಕಿ, ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತದ ಹಕ್ಕು ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿಲಾಗಿತ್ತು. ಇದನ್ನೂ ಓದಿ: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ

Live Tv

Leave a Reply

Your email address will not be published.

Back to top button