ಸಣ್ಣ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸಬೇಕು: ಎಂ.ವೆಂಕಯ್ಯ ನಾಯ್ಡು

Public TV
1 Min Read
Vice President M Venkaiah Naidu

ತಿರುವನಂತಪುರಂ: ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ಸೇವಾ ಮನೋಭಾವವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಕೇರಳದ ಕ್ಯಾಥೋಲಿಕ್ ಸಮುದಾಯದ ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150ನೇ ಪುಣ್ಯತಿಥಿಯ ಅಂಗವಾಗಿ ಮನ್ನನಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಎಂ.ವೆಂಕಯ್ಯ ನಾಯ್ಡು ಅವರು ಆಗಮಿಸಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು, ಇಂದು, ಈ ದೇಶದ ಯುವಜನರಲ್ಲಿ ಚಿಕ್ಕ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ತಜ್ಞರ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮ ತಗೆದುಕೊಳ್ಳುತ್ತೆ: ಭಗವಂತ್ ಖೂಬಾ

SCHOOL TANK 1

ಒಮ್ಮೆ ಈ ಸಾಂಕ್ರಾಮಿಕ ರೋಗವು ಹೋಗಿ, ದೇಶದಲ್ಲಿ ಸಹಜ ಸ್ಥಿತಿ ನಿರ್ಮಾಣವಾದ ಮೇಲೆ ಶಾಲೆಗಳಲ್ಲಿ ಸೇವಾ ಮನೋಭಾವನ್ನು ಮೂಡಿಸಬೇಕು. ಇದಕ್ಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎರಡರಿಂದ ಮೂರು ವಾರಗಳ ಸಮುದಾಯ ಸೇವೆಯನ್ನು ಕಡ್ಡಾಯಗೊಳಿಬೇಕು ಎಂದು ಸಲಹೆ ನೀಡಿದರು.

ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸುವುದರಿಂದ ಇತರರೊಂದಿಗೆ ಹೇಗೆ ಮಾತನಾಡಬೇಕು. ಹೇಗೆ ಇತರರನ್ನು ಕಾಳಜಿ ವಹಿಸಬೇಕು ಎಂಬ ಮನೋಭಾವ ಬೆಳೆಯಲು ಸಹಾಯವಾಗುತ್ತೆ ಎಂದು ತಿಳಿಸಿದರು.

SCHOOL 2
ಕಾಳಜಿ ಮಾಡುವುದು ಮತ್ತು ಹಂಚಿ ತಿನ್ನುವುದು ಭಾರತದ ಪ್ರಾಚೀನ ಸಂಸ್ಕೃತಿಯ ತಿರುಳಾಗಿದೆ. ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ನಮಗೆ, ಇಡೀ ಪ್ರಪಂಚವು ನಮ್ಮ ಕಾಲಾತೀತ ಆದರ್ಶದಲ್ಲಿ ಸುತ್ತುವರಿದಿರುವ ಒಂದು ಕುಟುಂಬವಾಗಿದೆ. ‘ವಸುಧೈವ ಕುಟುಂಬಕಂ’ ಈ ಮನೋಭಾವದಿಂದ ನಾವು ಒಟ್ಟಾಗಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

ಸಂತರ ಗುರುತು ಮತ್ತು ದೃಷ್ಟಿ ಕ್ಯಾಥೋಲಿಕ್ ನಂಬಿಕೆಯ ಆದರ್ಶಗಳ ಮೇಲೆ ರೂಪುಗೊಂಡಿದ್ದರೂ, ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಗಳ ಕಾರ್ಯಗಳು ಆ ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸೀಮಿತವಾಗಿಲ್ಲ ಎಂದು ವಿವರಿಸಿದರು.

Share This Article
Leave a Comment

Leave a Reply

Your email address will not be published. Required fields are marked *