ನವದೆಹಲಿ: ಗ್ರಾಹಕರಿಂದ ಒತ್ತಾಯ ಪೂರ್ವಕವಾಗಿ ಆಧಾರ್ ಕಾರ್ಡ್ ಸಲ್ಲಿಸುವಂತೆ ಒತ್ತಡ ಹೇರುವ ಸಂಸ್ಥೆಗಳಿಗೆ ಬರೋಬ್ಬರಿ 1 ಕೋಟಿ ರೂಪಾಯಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ಮುಂದಾಗಿದೆ.
ಬ್ಯಾಂಕ್ ಖಾತೆ ತೆರೆಯಲು ಮತ್ತು ಸಿಮ್ ಕಾರ್ಡ್ ಸಂಪರ್ಕ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲವೆಂಬ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ, ಕೇಂದ್ರ ಸರ್ಕಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಮತ್ತು ಇಂಡಿಯನ್ ಟೆಲಿಗ್ರಾಮ್ ಕಾಯ್ದೆ ತಿದ್ದುಪಡಿಗಾಗಿ ಸಿದ್ಧಗೊಂಡಿರುವ ಪ್ರಸ್ತಾವಿತ ಮಸೂದೆಗೆ ಸೋಮವಾರ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.
Advertisement
Advertisement
ಇನ್ನು ಮುಂದೆ ಯಾವುದೇ ಬ್ಯಾಂಕ್ ಹಾಗೂ ಟೆಲಿಕಾಂ ಕಂಪನಿಗಳು ಬಲವಂತವಾಗಿ ಗ್ರಾಹಕರಿಂದ ಆಧಾರ್ ಮಾಹಿತಿಯನ್ನು ಪಡೆಯುವಂತಿಲ್ಲ. ಒಂದು ವೇಳೆ ಆಧಾರ್ ಕಾರ್ಡ್ ಬೇಕೇ ಬೇಕೆಂದು ಗ್ರಾಹಕರ ಮೇಲೆ ಒತ್ತಡ ಹೇರಲು ಮುಂದಾದರೆ ಅಂತವರ ವಿರುದ್ಧ ಭಾರೀ ದಂಡವನ್ನೇ ವಸೂಲಿ ಮಾಡುವ ಅಂಶಗಳು ಈ ಮಸೂದೆಯಲ್ಲಿದೆ.
Advertisement
ಯಾವುದೇ ಬ್ಯಾಂಕಿನ ಖಾತೆ ತೆರೆಯಲು ಅಥವಾ ಹೊಸ ಸಿಮ್ ಕಾರ್ಡ್ ಕನೆಕ್ಷನ್ ಪಡೆಯಲು ಗ್ರಾಹಕರು ಆಧಾರ್ ಕಾರ್ಡ್ ನೀಡಲೇಬೇಕಿಲ್ಲ. ಒಂದು ವೇಳೆ ಬ್ಯಾಂಕ್ ಹಾಗೂ ಟೆಲಿಕಾಂ ಸಂಸ್ಥೆಗಳು ಆಧಾರ್ ಕಾರ್ಡ್ ನೀಡುವಂತೆ ಒತ್ತಾಯಿಸಿದರೆ ಅವರಿಗೆ 1 ಕೋಟಿ ರೂಪಾಯಿ ದಂಡ ಹಾಗೂ ಸಿಬ್ಬಂದಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲು ಕೇಂದ್ರ ನಿರ್ಧರಿಸಿದೆ. ಇದಲ್ಲದೇ ಆಧಾರ್ ಮಾಹಿತಿಯನ್ನು ಸೋರಿಕೆ ಮಾಡಲು ಯತ್ನಿಸುವವರ ವಿರುದ್ಧ ಇದುವರೆಗೂ ಇದ್ದ 3 ವರ್ಷಗಳ ಜೈಲು ಶಿಕ್ಷೆಯ ಬದಲಾಗಿ, 10 ವರ್ಷಗಳ ಕಾಲ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Advertisement
ಆಧಾರ್ ಕಾರ್ಡ್ ಬಗ್ಗೆ ಸುಪ್ರೀಂ ಹೇಳಿದ್ದೇನು?
ಸರ್ಕಾರಿ ಸೌಲಭ್ಯಗಳ ಪಡೆಯಲು `ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಸೆಪ್ಟೆಂಬರ್ 26ರಂದು ಸುಪ್ರೀಂಕೋರ್ಟ್ ತೆರೆದಿತ್ತು. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನ್ವಿಲ್ಕರ್, ಅಶೋಕ್‍ಭೂಷಣ್ ಅವರನ್ನು ಒಳಗೊಂಡಿದ್ದ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಎತ್ತಿ ಹಿಡಿದಿತ್ತು.
ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದರೆ, ಸಂವಿಧಾನವನ್ನೇ ವಿರೋಧಿಸಿದಂತೆ ಎಂದು ಪೀಠ ತಿಳಿಸಿತ್ತು.
ಯಾವುದಕ್ಕೆ ಆಧಾರ್ ಬೇಕು..?
1. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ.
2. ಪ್ಯಾನ್, ಆದಾಯ ತೆರಿಗೆ (ಐಟಿ ರಿಟರ್ನ್ಸ್), ಆಸ್ತಿ ಖರೀದಿಗೆ ಆಧಾರ್ ಕಡ್ಡಾಯ.
3. ಪ್ಯಾನ್ ನಂಬರ್ ಗೆ ಅಧಾರ್ ಕಡ್ಡಾಯವಾಗಿ ಲಿಂಕ್ ಮಾಡಲೇಬೇಕು.
4. ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯ ಸಲ್ಲಿಸುವುದು.
ಯಾವುದಕ್ಕೆ ಬೇಡ..?
1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
3. ಎಲ್ಲ ಬ್ಯಾಂಕ್‍ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
5. ಸಿಬಿಎಸ್‍ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಪ್ ಗಳಿಗೆ ಕಡ್ಡಾಯವಲ್ಲ.
7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv