ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಡಿ.27 ರಂದು ಪರಿಹಾರ ವಿತರಣೆ

Advertisements

ಬೆಂಗಳೂರು: ಜಿಲ್ಲಾಡಳಿತ ಹಾಗೂ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವತಿಯಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ವಾರಸುದಾರರು ಹಾಗೂ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮವನ್ನು ಡಿಸೆಂಬರ್ 27 ಬೆಳಗ್ಗೆ 11:00 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನ, ಕೆ.ಆರ್.ರಸ್ತೆ, ಬಸವನಗುಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.

Advertisements

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

Advertisements

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಉದಯ್.ಜಿ.ಗರುಡಾಚಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಘನ ಉಪಸ್ಥಿತಿಯಲ್ಲಿ ಇರುತ್ತಾರೆ.

ಈ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ ಸಚಿವ ಸಿ.ಎಸ್.ಅಶ್ವಥ್ ನಾರಾಯಣ, ವಸತಿ ಸಚಿವ ವಿ.ಸೋಮಣ್ಣ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಗರಾಭಿವೃದ್ಧಿ ಸಚಿವ ಬಿ.ವಿ.ಬಸವರಾಜ್, ಸಹಕಾರ ಸಚಿವ ಸೋಮಶೇಖರ್, ಅಬಕಾರಿ ಸಚಿವ ಗೋಪಾಲಯ್ಯ.ಕೆ, ಸಂಸದರಾದ ಎಲ್.ಎಸ್.ತೇಜಸ್ವಿ ಸೂರ್ಯ, ಡಿ.ವಿ.ಸದಾನಂದ ಗೌಡ, ಪಿ.ಸಿ.ಮೋಹನ್, ಡಿ.ಕೆ.ಸುರೇಶ್, ಬಚ್ಚೇಗೌಡ ಸೇರಿದಂತೆ ರಾಜ್ಯಸಭೆಯ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಬಿಬಿಎಂಪಿ ಆಡಳಿತಗಾರರು ರಾಕೇಶ್ ಸಿಂಗ್, ಬಿಬಿಎಂಪಿ ಆಯುಕ್ತರು ಗೌರವ್ ಗುಪ್ತ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: 50 ಕೋಟಿ ಕೊಟ್ಟರೆ ನಾನು ಇವತ್ತೇ ಜೈಲಿಗೆ ಹೋಗ್ತೀನಿ: ಎ.ಮಂಜು ತಿರುಗೇಟು

Advertisements

Advertisements
Exit mobile version