ಬೆಳಗಾವಿ: ಬೆಳಗಾವಿ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸನ್ನು ದೂರುದಾರೆ ಹಿಂಪಡೆದಿದ್ದಾರೆ.
ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ಥೆಯ ತಾಯಿ ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾವೂ ಸಹ ಕನ್ನಡಿಗರೇ ಇದ್ದೇವೆ. ಈ ಜಗಳವನ್ನು ಕನ್ನಡ, ಮರಾಠಿ ಜಗಳ ಮಾಡಲಾಗುತ್ತಿದೆ. ನಾವೂ ಸಹ ಕನ್ನಡಿಗರು. ಇದನ್ನು ಬೆಳೆಸಬೇಡಿ ಎಂದು ವೀಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ.
Advertisement