ಉಡುಪಿ: ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ (Actor Chetan) ವಿರುದ್ಧ ಇದೀಗ ಪಂಜುರ್ಲಿ (Panjurli) ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.
ಈ ಸಂಬಂಧ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಮಾತನಾಡಿ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ನಾವು ಸೇವೆ ಕೊಡುವ ದೈವಗಳ ಮುಂದೆಯೇ ನಾವು ಪ್ರಾರ್ಥನೆ ಮಾಡುತ್ತೇವೆ. ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಈ ಬಗ್ಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು.
Advertisement
Advertisement
ನಟರಿಗೆ ನಟನೆ ಮಾಡಲು ಗೊತ್ತಿರಬಹುದು. ನಾವು ದೈವಾರಾಧಕರು ನಮಗೆ ನಟಿಸಲು ಗೊತ್ತಿಲ್ಲ. ನಾವು ತಲೆತಲಾಂತರಗಳಿಂದ ಸತ್ಯವನ್ನು ಪಾಲನೆ ಮಾಡಿಕೊಂಡು ಬಂದವರು. ಭೂತಾರಾಧನೆಗೆ ಇಂತಿಷ್ಟು ವರ್ಷದ ಹಿನ್ನೆಲೆ ಎಂಬ ದಾಖಲೆ ನಮ್ಮಲ್ಲಿ ಇಲ್ಲ. ಯಾವುದೋ ಒಂದು ಪುಸ್ತಕ ಹಿಡಿದುಕೊಂಡು ಮಾತನಾಡುವುದು ತಪ್ಪು ಎಂದು ಗರಂ ಆದರು. ಇದನ್ನೂ ಓದಿ: ದೈವಾರಾಧನೆ ಹಿಂದುತ್ವದ ಭಾಗವಲ್ಲವೆಂದ ಚೇತನ್ ವಿರುದ್ಧ ದೂರು ದಾಖಲು
Advertisement
Advertisement
ಕರಾವಳಿಯಾದ್ಯಂತ ಪರವ, ಪಂಪದ ನಲಿಕೆಯವರು ಜೀವಿಸುತ್ತಿದ್ದೇವೆ. ನಾವು ಅಲೆಮಾರಿಗಳು ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಹಿರಿಯರ ಕಾಲದಿಂದ ನಾವು ಹಿಂದೂ ಸಂಪ್ರದಾಯವನ್ನು ಆರಾಧನೆ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ದೈವಗಳಿಗೆ ಮೂಲ ಶಬ್ದವೇ ತುಳು. ನಾವು ನಂಬಿಕೊಂಡ ಸತ್ಯದ ಮೂಲಕ ಚೇತನ್ ಗೆ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಹೇಳಿದರು.
ನಟ ಚೇತನ್ ಬಹಳ ದೊಡ್ಡ ಜ್ಞಾನಿ ಆಗಿರಬಹುದು. ನಮ್ಮ ನೆಲ, ನಮ್ಮ ಕುಲ ನಮ್ಮ ಆಚರಣೆಯ ಬಗ್ಗೆ ಮಾತನಾಡುವ ಜ್ಞಾನ ಇವರಿಗೆ ಇಲ್ಲ. ವ್ಯಕ್ತಿಗತವಾಗಿ ಇವರಿಗೆ ನಾವು ಉತ್ತರ ಕೊಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಶೂಟಿಂಗ್‍ಗೆ ಕೋಣ ಕೊಡಲು ಹಿಂದೇಟು ಹಾಕಿದ್ದ ಭಟ್ರು- ಇದು ಕಾಂತಾರ ದಂತಕಥೆಯ ಇನ್‍ಸೈಡ್ ಸ್ಟೋರಿ