ಮಂಡ್ಯ, ಕೋಲಾರದಲ್ಲೂ ನಟ ಉಪೇಂದ್ರ ವಿರುದ್ಧ ದೂರು

Public TV
2 Min Read
upendra 3

ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ (Upendra) ಜಾತಿನಿಂದನೆಯ (Caste Abuse) ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂಬ ವಿಚಾರ ವಿಪರೀತ ಚರ್ಚೆಗೆ ಕಾರಣವಾಗಿದೆ. ಅವರು ಆಡಿದ ಮಾತುಗಳ ವಿಚಾರವಾಗಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಅವರನ್ನು ಗಡಿಪಾರು ಮಾಡುವಂತೆ ಕೋಲಾರದಲ್ಲಿ (Kolar) ಆಗ್ರಹಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಉಪೇಂದ್ರ ವಿರುದ್ಧ ಮಾಲೂರು ಪೊಲೀಸ್ ಠಾಣೆಗೆ ದೂರು (Complaint) ನೀಡಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯ ಎಸ್.ಎಂ.ವೆಂಕಟೇಶ್ ಹಾಗೂ ವಿಜಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.

upendra 2

ಬೆಂಗಳೂರಿನಲ್ಲಿ ಮೂರು ದೂರು ಹಾಗೂ ಕೋಲಾರದಲ್ಲಿ ಒಂದು ದೂರ ದಾಖಲಾದ ಬೆನ್ನಲ್ಲೇ ಮಂಡ್ಯದಲ್ಲೂ (Mandya) ಉಪೇಂದ್ರ ವಿರುದ್ದ ದೂರು ಸಲ್ಲಿಕೆಯಾಗಿದೆ. ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಮದ್ದೂರು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಈ ದೂರು ಸಲ್ಲಿಕೆಯಾಗಿದೆ.

Upendra 2

ಒಂದು ಕಡೆ ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದರೆ ಮತ್ತೊಂದು ಕಡೆ  ತಮ್ಮ ಮೇಲೆ ದಾಖಲಾಗಿರುವ ಎಫ್.ಐ.ಆರ್ ಅನ್ನು ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ (High Court) ಮೆಟ್ಟಿಲು ಏರಿದ್ದಾರೆ. ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

upendra 6

ಒಂದು ಕಡೆ ಎಫ್.ಐ.ಆರ್ ರದ್ದು ಕೋರಿ ಉಪೇಂದ್ರ ಅರ್ಜಿ ಸಲ್ಲಿಸಿದ್ದರೆ, ಮತ್ತೊಂದು ಕಡೆ ರಾಜ್ಯ ನಾನಾ ಕಡೆಗಳಲ್ಲೂ ಇವರ ವಿರುದ್ಧ ದೂರು ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಎರಡು ಕಡೆ ಎಫ್.ಐ.ಆರ್ ದಾಖಲಾಗಿದ್ದರೆ ಮಂಡ್ಯ ಮತ್ತು ಕೋಲಾರದಲ್ಲೂ ಪೊಲೀಸ್ ಠಾಣೆಗೆ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. ಅಲ್ಲಲ್ಲಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಇದನ್ನೂ ಓದಿ:Kiccha 46: ಸುದೀಪ್‌ ಸಿನಿಮಾದಲ್ಲಿ ಸಂಯುಕ್ತಾ ಹೊರನಾಡ್

upendra 1

ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶ ಪೊಲೀಸರು ನಟ ಉಪೇಂದ್ರ ಅವರಿಗೆ ನೋಟಿಸ್ ಕೊಡುತ್ತಿದ್ದಂತೆ ಫೋನ್ ಸ್ವಿಚ್ ಆಪ್ ಮಾಡಿಕೊಂಡು ಉಪೇಂದ್ರ ಎಸ್ಕೇಪ್  ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೇರೆಯವರ ಕಡೆಯಿಂದ ಉಪೇಂದ್ರ ಅವರನ್ನು ಪೊಲೀಸರು ಸಂಪರ್ಕ ಮಾಡುತ್ತಿದ್ದಾರಂತೆ.

ಉಪೇಂದ್ರ ಅವರಿಗೆ ಸೇರಿದ ಎರಡು ಮನೆ ಹಾಗೂ ಅವರ ವಾಟ್ಸಪ್ ಗೆ ನೋಟಿಸ್ ಕಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ, ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿರೋ ಎಫ್ ಐ ಆರ್ ಅನ್ನು ಕೂಡ ಎಸಿಪಿ ವಿವಿಪುರಂಗೆ ವರ್ಗಾವಣೆ ಮಾಡಲಿದ್ದಾರೆ ಅಂತ ಹಲಸೂರುಗೇಟ್ ಪೊಲೀಸರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article