ಬೆಂಗಳೂರು: ಬೆಳಗಾವಿಯಲ್ಲಿ ಕಬ್ಬಿನ ಬಾಕಿ ಬಿಲ್ ಪಾವತಿ ಹಾಗೂ ಬೆಂಬಲ ಬೆಲೆ ನಿಗದಿಗಾಗಿ ಪ್ರತಿಭಟಿಸುತ್ತಿದ್ದ ರೈತರ ಬಗ್ಗೆ ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಎಚ್‍ಡಿಕೆ ವಿರುದ್ಧ ದೂರು ದಾಖಲಾಗಿದೆ.
ಸಿಎಂ ಕುಮಾರಸ್ವಾಮಿ ಅವರು ರೈತ ಮಹಿಳೆ ಜಯಶ್ರೀ ಬಗ್ಗೆ 4 ವರ್ಷದಿಂದ ಎಲ್ಲಿ ಮಲಗಿದ್ದೆ? ಎಂದು ಅವಮಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನವು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲಿಸಲಾಗಿದೆ.
Advertisement
Advertisement
ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿ ಸೂಕ್ತ ತನಿಖೆ ನಡೆಸಿ ಸಿಎಂ ವಿರುದ್ಧ ಕ್ರಮಕೈಗೊಳ್ಳುವಂತೆ ಡಿಜಿ-ಐಜಿಪಿ ನೀಲಮಣಿ ಎನ್. ರಾಜುಗೆ ಮನವಿ ಮಾಡಿದ್ದಾರೆ.
Advertisement
ಕಬ್ಬು ಬೆಳೆಗಾರರ ಹೋರಾಟದ ನಡುವೆಯೇ ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಕಬ್ಬು ರೈತರು ಮತ್ತು ಕಾರ್ಖಾನೆ ಮಾಲೀಕರ ಮಹತ್ವದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಗಂಟೆಗೆ ಸಭೆ ನಡೆಯಲಿದ್ದು, ಕಬ್ಬು ಬಾಕಿ ಪಾವತಿ ಮತ್ತು ರೈತರ ಇತರೆ ಬೇಡಿಕೆಗಳ ಕುರಿತು ಚರ್ಚೆ ನಡೆಯಲಿದೆ.
Advertisement
ಈ ವೇಳೆ ರೈತರ ವಿರುದ್ಧ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ರೈತರು ತರಾಟೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇನ್ನೂ ರೈತರ ಸಭೆ ಮುಗಿದ ಬಳಿಕ ಬೆಂಬಲ ಬೆಲೆ ನಿಗದಿ ಮಾಡುವ ಕುರಿತು ಮಹತ್ವದ ಸಭೆ ನಡೆಯಲಿದ್ದು, ಇದರಲ್ಲಿ ಸಚಿವ ಜಾರ್ಜ್ ಸೇರಿದಂತೆ ಹಲವು ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕಬ್ಬು ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವ ಸಾಧ್ಯತೆ ಇದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews