ಮೈಸೂರು: ಮುಡಾ ಅವ್ಯವಹಾರ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ (Mysuru) ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪ ಹೊರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: ಕಾನೂನುಬದ್ಧವಾಗಿಯೇ ಮುಡಾ ಬದಲಿ ಸೈಟ್ ಪಡೆಯಲಾಗಿದೆ – ಹೈಕಮಾಂಡ್‌ಗೆ ಸಿಎಂ ವರದಿ!
Advertisement
Advertisement
ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರು ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಪ್ರಕರಣ ಸಂಬಂಧ ಹಲವು ಪ್ರಶ್ನೆ ಎತ್ತಿದ್ದಾರೆ.
Advertisement
ಪ್ರಕರಣ ಸಂಬಂಧ ಹಲವಾರು ಅನುಮಾನಗಳು ವ್ಯಕ್ತಪಡಿಸಿದ್ದಾರೆ. ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ. 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್‌ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ? ದೇವರಾಜು ಮತ್ತು ನಂತರ ಮಲ್ಲಿಕಾರ್ಜುನಸ್ವಾಮಿ ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ. 5% ಮಲ್ಲಿಕಾರ್ಜುನ ಹಾಗೂ ಪಾರ್ವತಿ ಅವರ ಹೆಸರಿಗೆ ಖಾತೆ ವರ್ಗಾವಣೆ ಮಾಡುವ ವೇಳೆ ಸ್ಥಳ ಪರಿಶೀಲನೆ ಮಾಡಲಿಲ್ವ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು – ಎಸ್‌ಟಿಎಸ್ ಬಾಂಬ್
Advertisement
ಮಾಡಿದ್ದರೆ ಮುಡಾ ಅಭಿವೃದ್ಧಿ ಮಾಡಿರುವುದು ಕಂಡುಬಂದಿದ್ದರೂ ಕೃಷಿ ಭೂಮಿ ಎಂದು ಹೇಗೆ ಖಾತೆ ಮಾಡಿದರು? ನಿಜವಾದ ಭೂ ಮಾಲೀಕರ ವಂಶವೃಕ್ಷ, ಅವರ ಮರಣ ಪ್ರಮಾಣಪತ್ರ ಸೇರಿ ಹಲವು ದಾಖಲೆಗಳ ಉಲ್ಲೇಖ ಇಲ್ಲ ಯಾಕೆ? ಕೆಸರೆ ಗ್ರಾಮದ 464ನೇ ಸರ್ವೆ ನಂಬರ್‌ನ 3.16 ಎಕರೆ ಭೂ ಭೂ ಸ್ವಾಧೀನ ಕೈ ಬಿಡಲು ಕಾರಣ ಏನು? ಅಂತಹ ಯಾವ ಪ್ರಭಾವವನ್ನು (ಕಾರಣವನ್ನು) ಜವರ ಬಳಸಿದ್ದರು. 2005ರಲ್ಲೇ ಮಲ್ಲಿಕಾರ್ಜುನ ಸ್ವಾಮಿಗೆ ಅನ್ಯಕ್ರಾಂತ ಆಗಿದ್ದರೆ ಸದರಿ ಉಲ್ಲೇಖ ಆರ್‌ಟಿಸಿಗಳಲ್ಲಿ ಯಾಕೆ ಇಲ್ಲ? 2004-05ನೇ ಸಾಲಿನ ಆರ್‌ಟಿಸಿಯ ಕಲಂ 10ರಲ್ಲಿ MR8/92-93 ಎಂಬ ಉಲ್ಲೇಖವಿದೆ. ಇದರ ಒಖ ಗಮನಿಸಿದಾಗ ಮಾರಪ್ಪ ಎಂಬವರಿಗೆ ಸೇರಿದ ದಾಖಲೆ ಎಂದು ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿರುವ ದೇವರಾಜು ಕುಟುಂಬದ ವಿಳಾಸವೇ ಅಸ್ಯಿತ್ವದಿಲ್ಲಿ ಇಲ್ಲದಿರುವುದು ದೊಡ್ಡ ಅನುಮಾನ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ಇಷ್ಟೆಲ್ಲ ಅನುಮಾನ ಇದೆ. ಈಗಾಗಿ ಪ್ರಕರಣ ಸಮಗ್ರ ತನಿಖೆ ನಡೆಸಬೇಕು. 10 ದಿನಗಳ ಒಳಗೆ ಇದಕ್ಕೆ ಉತ್ತರ ಕೊಡಬೇಕು. ಇಲ್ಲವಾದರೆ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಫೋಟಕ ಮಾಹಿತಿ ಲಭ್ಯ!