ಬೀದರ್: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ಔರಾದ್ ಠಾಣೆಗೆ ದೂರು ನೀಡಿದ್ದು, ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಎಕ್ಕಂಬಾ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಿದ್ದಾರೆ. ಈ ವೇಳೆ ಕೊವೀಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ 10 ರಂದು ಧಾರ್ಮಿಕ ಕಾರ್ಯಕ್ರಮದಲ್ಲಿ ನಡೆದಿತ್ತು. ಈ ಸಮಯದಲ್ಲಿ ಸಚಿವರು ಸೇರಿದಂತೆ ಸಾವಿರಾರು ಜನ ಒಂದೇ ಕಡೆ ಸೇರಿದ್ದರು. ಹೀಗಾಗಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಸಚಿವ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ.
ಧಾರ್ಮಿಕ ಕಾರ್ಯಕ್ರಮ ಆಯೋಜಕ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿದ್ದು, ದೂರು ನೀಡಿದರು ಇನ್ನು ಸಚಿವರ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ. ಹೀಗಾಗಿ ಸರ್ಕಾರದ ಭಾಗವಾಗಿರುವ ಸಚಿವರು ಕೋವಿಡ್ ನಿಯಮಗಳ ಉಲ್ಲಂಘನೆ ಮಾಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್