ಕಿರುತೆರೆ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ರಮೋಲಾ (Ramola) ವಿರುದ್ಧ ಫಿಲ್ಮ್ ಚೇಂಬರ್‌ಗೆ (Film Chamber) ದೂರು ನೀಡಿದೆ ಚಿತ್ರತಂಡ. ಭರ್ಜರಿ ಬ್ಯಾಚುಲರ್ಸ್ (Bharjari Bachelors) ರಿಯಾಲಿಟಿ ಶೋನಲ್ಲಿ ರಕ್ಷಕ್‌ಗೆ ಜೋಡಿಯಾಗಿದ್ದ ರಮೋಲಾ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದೆ ರಿಚ್ಚಿ ಚಿತ್ರತಂಡ.
ನಟಿ ರಮೋಲಾ ಅವರು `ರಿಚ್ಚಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಈಗ ಚಿತ್ರದ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕ ರಿಚ್ಚಿ ಅವರು ಈ ಬಗ್ಗೆ ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದಾರೆ. ಸಿನಿಮಾದ ಪ್ರಮೋಷನ್‌ಗೆ ರಮೋಲಾ ಬರುತ್ತಿಲ್ಲ, ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ?
ಅಂದಹಾಗೆ ರಿಚ್ಚಿ ಸಿನಿಮಾದಲ್ಲಿ ರಮೋಲಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಪ್ರಮೋಷನ್ಸ್ ಬನ್ನಿ ಎಂದರೆ ಬರುತ್ತಿಲ್ಲ ಎಂದು ನಿರ್ಮಾಪಕ ಹೇಮಂತ್ ರಿಚ್ಚಿ ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟಿದ್ದಾರೆ. ಕನ್ನಡತಿ ಧಾರಾವಾಹಿಯ ಪಾತ್ರದಿಂದ ಜನಪ್ರಿಯತೆ ಗಳಿಸಿರುವ ರಮೋಲಾ ರಿಚ್ಚಿ ಸಿನಿಮಾ ಶೂಟಿಂಗ್ ಬಳಿಕ ರಿಯಾಲಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ಈಗ ಸಿನಿಮಾ ತಂಡ ಪ್ರಮೋಷನ್‌ಗೆ ಕರೆಯುತ್ತಿದೆ. ಆದರೆ ಕರೆ ಸ್ವೀಕರಿಸದೇ ಚಿತ್ರತಂಡಕ್ಕೆ ಸಹಕಾರ ನೀಡ್ತಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಫಿಲ್ಮ್ ಚೇಂಬರ್‌ಗೆ ಇಡೀ ಚಿತ್ರತಂಡ ದೂರು ನೀಡಿದೆ.

