ಜೈ ಶ್ರೀರಾಮ್ ಎಂದು ಮುಸ್ಲಿಂ ಹತ್ಯೆ ವಿವಾದ : ಸಾಯಿ ಪಲ್ಲವಿ ವಿರುದ್ಧ ದೂರು

Public TV
1 Min Read
sai pallavi 2

ಮಾಧ್ಯಮವೊಂದರ ಸಂದರ್ಶನದಲ್ಲಿ ‘ಕಾಶ್ಮೀರ ಪಂಡಿತರ ಹತ್ಯೆ ಮತ್ತು ಜೈ ಶ್ರೀರಾಮ್ ಎಂದು ಹೇಳುತ್ತಾ ಗೋ ಸಾಗಾಣಿ ಮಾಡುತ್ತಿದ್ದು ಮುಸ್ಲಿಂ ಹತ್ಯೆ ಎರಡೂ ಒಂದೇ ಅನಿಸುತ್ತಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ಖಂಡಿಸಬೇಕು’ ಎಂದು ಹೇಳಿಕೆ ನೀಡಿದ್ದ ದಕ್ಷಿಣದ ತಾರೆ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿರುವುದು ಸರಿಯಲ್ಲ ಎಂದು ವಾದ ನಡೆದಿದೆ.

sai pallavi 3

ಮೊನ್ನೆ ಇಂಥದ್ದೊಂದು ಹೇಳಿಕೆಯನ್ನು ಸಾಯಿ ಪಲ್ಲವಿ ಕೊಡುತ್ತಿದ್ದಂತೆಯೇ ಎಲ್ಲಡೆ ಆಕ್ರೋಶ ವ್ಯಕ್ತವಾಯಿತು. ಸಾಯಿ ಮಾತಿಗೆ ಪರ ವಿರೋಧ ವ್ಯಕ್ತವಾಯಿತು. ಕಳ್ಳಸಾಗಾಣಿಕೆದಾರನಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿದ್ದಕ್ಕಾಗಿ ಭಜರಂಗ ದಳದ ನಾಯಕರು, ಹೈದರಾಬಾದ್ ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಶಿವಣ್ಣ – ತಲೈವಾ ಸಿನಿಮಾಗೆ `ಜೈಲರ್’ ಟೈಟಲ್ ಫಿಕ್ಸ್

sai pallavi

ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಕೆಲವರು ಮೆಚ್ಚಿಕೊಂಡರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *