ಮಂಡ್ಯ: ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಕುಟುಂಬದ ವಿರುದ್ಧ NIA (ಕೇಂದ್ರೀಯ ತನಿಖಾ ದಳ) ತನಿಖೆ ನಡೆಸುವಂತೆ ಒತ್ತಾಯಿಸಿ ಅನಂತ ಕುಮಾರ್ ಅಭಿಮಾನಿಗಳ ಸಂಘವು ಒತ್ತಾಯಿಸಿದೆ.
ಭಾರತದ ಆತಂರಿಕ ಭದ್ರತೆಗೆ ಅಪಾಯವಿದ್ದು, ಮುಸ್ಕಾನ್ ಕುಟುಂಬದ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸಂಘದ ಅನಿಲ್ ಮಂಡ್ಯ ಜಿಲ್ಲೆಯ ಎಸ್‌ಪಿಗೆ ದೂರು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಮದ್ಯ ಸೇವನೆಗೆ ಹಣಕೊಡಲಿಲ್ಲವೆಂದು ತಂದೆಯನ್ನೆ ಕೊಂದ ಪಾಪಿ
Advertisement
Advertisement
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅನಿಲ್, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಮುಖಂಡರು ಹಣ, ಹುಡುಗೊರೆ ನೀಡಿ ವಿದ್ಯಾರ್ಥಿನಿಯನ್ನು ಬೆಂಬಲಿಸಿದ್ದಾರೆ. ಹೊರ ರಾಜ್ಯದವರೂ ಶಹಬ್ಬಾಸ್ ಗಿರಿ ನೀಡಿದ್ದಾರೆ. ಈ ನಡುವೆ ಆಲ್‌ಖೈದಾ ಸಹ ಬೆಂಬಲ ವ್ಯಕ್ತಪಡಿಸಿದ್ದು, ಇದರ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿದೆ ಎನ್ನುವ ಆತಂಕ ಶುರುವಾಗಿದೆ. ಇದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ACಯ ವಿಷಾನಿಲ ಸೋರಿಕೆ- ಒಂದೇ ಕುಟುಂಬದ ನಾಲ್ವರು ಸಾವು
Advertisement
Advertisement
ಈಚೆಗಷ್ಟೇ ಹೈಕೋರ್ಟ್ ನ್ಯಾಯಾಧೀಶರು ಸಹ ಆಲ್‌ಖೈದಾ ಪ್ರಸಂಶೆಯ ಹಿಂದೆ ದೊಡ್ಡ ಷಡ್ಯಂತರ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಇದು ದೇಶದ ಆಂತರಿಕ ಭದ್ರತೆಯ ವಿಚಾರ ಆಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು. ಮುಸ್ಕಾನ್ ಕುಟುಂಬದವರ ಪಾಸ್ ಪೋರ್ಟ್ ಇದ್ದಲ್ಲಿ ವಶಪಡಿಸಿಕೊಂಡು ಅವರು ದೇಶದಿಂದ ಹೊರ ಹೋಗದಂತೆ ನೋಡಿಕೊಳ್ಳಬೇಕು. ಜೊತೆಗೆ ಅವರನ್ನು ಪ್ರಸಂಶಿಸಿದ ಮುಖಂಡರನ್ನೂ ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದ್ದಾರೆ.