ಕಳೆದ ಜೂನ್ 22 ರಂದು ಕಾಲಿವುಡ್ನ ಜನಪ್ರಿಯ ನಟ ವಿಜಯ್ (Dalpati Vijay) ಹುಟ್ಟುಹಬ್ಬದ ಪ್ರಯುಕ್ತ ‘ಲಿಯೋ’ (Leo) ಚಿತ್ರತಂಡದವರು ಫಸ್ಟ್ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಜಯ್ ಅವರಿಗೆ ಶುಭಾಶಯ ಕೋರಿದ್ದರು. ಜೊತೆಗೆ ಸಿನಿಮಾದ ಮೊದಲ ಲಿರಿಕಲ್ ಹಾಡು (Song) ಬಿಡುಗಡೆ ಮಾಡಿದ್ದರು.
‘ನಾ ರೆಡಿದಾ ವರವಾ’ (Na Redida Varava) ಎಂಬ ಲಿರಿಕಲ್ ಹಾಡು ಅಂದು ಬಿಡುಗಡೆ ಆಗಿತ್ತು. ಅದೇ ಹಾಡು ಇದೀಗ ವಿವಾದಕ್ಕೂ ಕಾರಣವಾಗಿದೆ. ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಕೆಲವರ ವಿಚಾರಣೆ ಹಾಗೂ ಬಂಧನ ಕೂಡ ನಡೆದಿದೆ. ಈ ಹೊತ್ತಿನಲ್ಲಿ ಹಾಡಿನಲ್ಲಿ ಡ್ರಗ್ಸ್ (Drugs) ಪ್ರಚೋದಿಸುವಂತಹ ಸನ್ನಿವೇಶಗಳು ಇವೆಯಂತೆ. ಹಾಗಾಗಿ ಈ ಹಾಡಿನ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಸೆಲ್ವಂ ಅನ್ನುವವರು ದೂರು (Complaint) ನೀಡಿದ್ದು, ಮಾದಕ ಕ್ರಮ ನಿಯಂತ್ರಣ ತಡೆ ಕಾಯ್ದೆ ಅನ್ವಯ ಕ್ರಮ ತಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾ ರೆಡಿದಾ ವರವಾ ಹಾಡಿಗೆ ವಿಜಯ್ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಧ್ವನಿಯಾಗಿರುವುದು ವಿಶೇಷ. ಈ ಹಾಡಿಗೆ ವಿಷ್ಣು ಎಡವನ್ ಸಾಹಿತ್ಯ ರಚಿಸಿದ್ದು, ವಿಜಯ್ ಸಖತ್ ಸ್ಟೆಪ್ ಹಾಕಿದ್ದಾರೆ. ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮೂರು ಮಿಲಿಯನ್ಗಳಿಗೂ ಹೆಚ್ಚು ವೀಕ್ಷಣೆ ಕಂಡಿತ್ತು. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್
‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanakaraj) ಮತ್ತು ವಿಜಯ್ ಜೊತೆಯಾಗಿ ಕೆಲಸ ಮಾಡುತ್ತಿರುವ ‘ಲಿಯೋ’ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್ನಲ್ಲಿ ಲಲಿತ್ ಕುಮಾರ್ ನಿರ್ಮಿಸುತ್ತಿದ್ದಾರೆ. ಇನ್ನು, ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನೂ ರಚಿಸಿದ್ದಾರೆ ವಿಜಯ್.
‘ಲಿಯೋ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಅಕ್ಟೋಬರ್ 19ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಬಾಲಿವುಡ್ ನಟ ಸಂಜಯ್ ದತ್ ಈ ಚಿತ್ರದ ಮೂಲಕ ಕಾಲಿವುಡ್ಗೆ ಎಂಟ್ರಿ ಕೊಡುತ್ತಿದ್ದು, ವಿಜಯ್ ಮತ್ತು ಸಂಜಯ್ ದತ್ ಜೊತೆಗೆ ತ್ರಿಷಾ, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್, ಗೌತಮ್ ಮೆನನ್, ಮಿಸ್ಕಿನ್ ಮುಂತದವರು ಅಭಿನಯಿಸುತ್ತಿದ್ದಾರೆ.