ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯೆಯಾಗಿದ್ದ ಪದ್ಮಾವತಿ ಯಾದವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸುಬ್ಬಾರಾಯಡುಗೆ ಮಾಜಿ ಸಚಿವ ಜನಾರ್ದನರೆಡ್ಡಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ದೂರು ದಾಖಲಾಗಿದೆ.
ಏನಿದು ಪ್ರಕರಣ?: 2010 ರ ಫೆಬ್ರವರಿ 10ರಂದು ಪಾಲಿಕೆ ಸದಸ್ಯೆಯಾಗಿದ್ದ ಪದ್ಮಾವತಿ ಯಾದವ್‍ರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಅಂದು ಸಿಐಡಿ ವಹಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸಿಐಡಿ ಸಾಕ್ಷಿಗಳ ಕೊರತೆಯಿಂದ ಪ್ರಕರಣವನ್ನು ಅಂತ್ಯಗೊಳಿಸಿತ್ತು.
ಪದ್ಮಾವತಿ ಯಾದವ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪದ್ಮಾವತಿ ಸಹೋದರ ಸುಬ್ಬಾರಾಯಡು ಅವರು ಒತ್ತಾಯಿಸಿದ್ರು. ನಾನು ಸಿಬಿಐ ತನಿಖೆಗೆ ಒತ್ತಾಯಿಸಿದ್ದಕ್ಕೆ ಈಗ ಜನಾರ್ದನ ರಡ್ಡಿ ನನಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸುಬ್ಬಾರಾಯಡು ಬಳ್ಳಾರಿ ಎಸ್ಪಿ ಆರ್.ಚೇತನ್ ಹಾಗೂ ಐಜಿಪಿ ಮುರಗನ್ ರಿಗೆ ಪತ್ರ ಮುಖೇನ ದೂರು ಸಲ್ಲಿಸಿದ್ದಾರೆ.