ಬೆಂಗಳೂರು: ಧರ್ಮಸ್ಥಳ ದೇವಸ್ಥಾನದ (Dharmasthala Temple) ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ (Girish Mattannavar) ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.
ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು (Human Rights Commission) ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು | ದಯವಿಟ್ಟು ನನ್ನನ್ನು ಬಿಟ್ಟುಬಿಡಿ, ಸತ್ಯ ಹೇಳ್ತೀನಿ – ಚಿನ್ನಯ್ಯ ಕಣ್ಣೀರು
ಗಿರೀಶ್ ಮಟ್ಟಣ್ಣನವರ್ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದೂರುದಾರ ಸುರೇಶ್ ಗೌಡ, ಸುಳ್ಳು ಹೇಳಿ ಮಾನವ ಹಕ್ಕುಗಳ ಆಯೋಗವನ್ನ ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿ ಅಲ್ಲ. ಅಧಿಕಾರಿಗಳು ಕೂಡ ಶೀಘ್ರ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಪೊಲೀಸ್ ಠಾಣೆಗೂ ಈ ಸಂಬಂಧ ಶೀಘ್ರ ದೂರು ನೀಡುತ್ತೇವೆ ಎಂದರು.