ಬೆಂಗಳೂರು: ‘ದಿ-ವಿಲನ್’ ಚಿತ್ರದಲ್ಲಿನ ದೃಶ್ಯ ವಿರೋಧಿಸಿ ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.
ದಿ- ವಿಲನ್ ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಎಂಬವರು ಪ್ರೇಮ್ ಹಾಗೂ ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು ನೀಡಿದ್ದಾರೆ.
Advertisement
Advertisement
ದಿ-ವಿಲನ್ ಸಿನಿಮಾದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕನ್ನಡದ ಬಾವುಟ ಸುತ್ತಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಾಗಿದೆ. ಸದ್ಯ ಪ್ರೇಮ್ ಹಾಗು ಸುದೀಪ್ ಕ್ಷಮೆ ಕೇಳಬೇಕು, ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ.
Advertisement
ಸಿ.ಆರ್ ಮನೋಹರ್ ನಿರ್ಮಾಣದ ಪ್ರೇಮ್ ನಿರ್ದೇಶನದ ಶಿವರಾಜ್ ಕುಮಾರ್, ಸುದೀಪ್ ಅಭಿನಯದ ದಿ ವಿಲನ್ ಚಿತ್ರ ಅಕ್ಟೋಬರ್ 18 ರಂದು ಬಿಡುಗಡೆಯಾಗಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews