ಬೆಂಗಳೂರು: ನಟ, ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ಕೇಂದ್ರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಲಾಗಿದೆ. ಪ್ರಕಾಶ್ ರೈ ನಾಲ್ಕು ವೋಟರ್ ಐಡಿ ಹೊಂದಿದ್ದಾರೆ ಎಂದು ವಕೀಲ ಜಗನ್ ಕುಮಾರ್ ದೂರು ದಾಖಲಿಸಿದ್ದಾರೆ.
Advertisement
Advertisement
ಪ್ರಕಾಶ್ ರೈ ತೆಲಂಗಾಣದಲ್ಲಿ ಒಂದು, ತಮಿಳುನಾಡಿನಲ್ಲಿ ಎರಡು ವೋಟರ್ ಐಡಿಯನ್ನು ಹೊಂದಿದ್ದಾರೆ. ಇನ್ನು ನಾಮಪತ್ರದ ಘೋಷಣಾ ಪತ್ರದಲ್ಲಿ ತನ್ನ ಹೆಸರು ಶಾಂತಿನಗರ ವೋಟರ್ ಲಿಸ್ಟ್ ನಲ್ಲಿದೆ ಎಂದು ಹೇಳಿದ್ದರು. ಈ ಸುಳ್ಳು ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನಟ ಪ್ರಕಾಶ್ ರೈ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ವೋಟರ್ ಐಡಿ ಹೊಂದುವುದು ಕಾನೂನು ಪ್ರಕಾರ ಅಪರಾಧ. ಕೂಡಲೇ ಅವರ ಉಮೇದುವಾರಿಕೆಯನ್ನು ರದ್ದು ಮಾಡಬೇಕು ಎಂದು ವಕೀಲರಾದ ಜಗನ್ ಕುಮಾರ್ ಆಯೋಗಕ್ಕೆ ಮನವಿ ಮಾಡಿದ್ದಾರೆ.