ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರವಾಹಿಯ ಅಖಿಲ್ ಪಾತ್ರಧಾರಿ ರಾಜೇಶ್ ಧ್ರುವ ವಿರುದ್ಧ ದೂರು ದಾಖಲಾಗಿದೆ.
ರಾಜೇಶ್ ಧ್ರುವ 2017ರಲ್ಲಿ ಶ್ರುತಿ ಅವರನ್ನು ಮದುವೆಯಾಗಿ ಬಳಿಕ ಅವರಿಗೆ ವರದಕ್ಷಿಣೆ ತರುವಂತೆ ಟಾರ್ಚರ್ ನೀಡಿದ್ದಾರೆ. ಅಲ್ಲದೇ ಮಾನಸಿಕ ಹಿಂಸೆ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
Advertisement
Advertisement
ಶೃತಿ ಜೊತೆ ಲಿವಿಂಗ್ ಟುಗೆದರ್ ರಿಲೇಶನ್‍ಶಿಪ್‍ನಲ್ಲಿದ್ದ ಧ್ರುವ ಅವರು 2017ರಲ್ಲಿ ಶ್ರುತಿ ಜೊತೆ ಮದುವೆಯಾಗಿದ್ದರು. ಮದುವೆ ಆದ ಬಳಿಕ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಮದುವೆ ಆದರೂ ನನಗೆ ಮದುವೆಯಾಗಿಲ್ಲ ಎಂದು ಧ್ರುವ ಹೇಳಿ ತಿರುಗಾಡುತ್ತಿದ್ದರು.
Advertisement
ಮದುವೆಯಾದ ಬಳಿಕ ಧ್ರುವ ಬೇರೆ ಯುವತಿಯರ ಜೊತೆ ಆಫೇರ್ ಇಟ್ಟುಕೊಂಡಿದ್ದರು. ‘ತಕಧಿಮಿತ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿ ಆಗಿ ಭಾಗವಹಿಸುತ್ತಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಕೆ.ಎಸ್ ಪೊಲೀಸ್ ಠಾಣೆಯಲ್ಲಿ ಶೃತಿ ಪ್ರಕರಣ ದಾಖಲಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv