ನವದೆಹಲಿ: ವೀರ ಸಾವರ್ಕರ್ ಅವರನ್ನು ಹೇಡಿ ಎಂದು ಕರೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಪುಣೆಯಲ್ಲಿ ದೂರು ದಾಖಲಾಗಿದೆ.
ನವದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು, ವೀರ ಸಾವರ್ಕರ್ ಅವರನ್ನು ಹೇಡಿ ಅಂತ ಅವಮಾನಿಸಿದ್ದಾರೆ. ಅಷ್ಟೇ ಅಲ್ಲದೆ ಅವಿಧೇಯ ಭಾಷೆ ಬಳಸಿ ಸಾರ್ವಜನಿಕರ ಭಾವನೆಗೆ ಧಕ್ಕೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇಂತಹ ಹೇಳಿಕೆ ವಿಚಾರವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ದೂರು ದಾಖಲಾಗುತ್ತಿರುವುದು ಇದು ಮೊದಲೇನಲ್ಲ. ಕಳೆದ ವರ್ಷ ನವೆಂಬರ್ ನಲ್ಲಿ ಛತ್ತೀಸ್‍ಗಢ ಚುನಾವಣಾ ರ‍್ಯಾಲಿ ಭಾಷಣದಲ್ಲಿ, ವೀರ ಸಾವರ್ಕರ್ ಅವರು 1911ರಲ್ಲಿ ಅಂಡಮಾನ್‍ನ ಸೆಲ್ಯುಲಾರ್ ಜೈಲಿನಿಂದ ಹೊರಬರಲು ಬ್ರಿಟಿಷರ ಮುಂದೆ ಅಂಗಲಾಚಿದ್ದರು ಎಂದು ಹೇಳಿಕೆ ನೀಡಿದ್ದರು.
ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ವೀರ ಸಾವರ್ಕರ್‍ರ ಮೊಮ್ಮಗ ರಂಜಿತ್ ಸಾವರ್ಕರ್ ಎಐಸಿಸಿ ದೂರು ದಾಖಲಿಸಿದ್ದರು. ನಮ್ಮ ಅಜ್ಜ ವೀರ ಸಾರ್ವಕರ್ ಅವರು 27 ವರ್ಷಗಳ ಕಾಲ ಜೈಲಿನಲ್ಲಿದ್ದರು. ಆದರೆ ರಾಹುಲ್ ಗಾಂಧಿ ಹೇಳಿಕೆಯಿಂದ ಸುಳ್ಳಾಗಿದ್ದು, ಅವರ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದೇನೆ ಎಂದು ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv