ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೂ ಪಾದಯಾತ್ರೆ ಕೈಗೊಳ್ಳುವುದರ ಮೂಲಕ ಕಾಂಗ್ರೆಸ್ ನಾಯಕರು ಜನರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಸಿದವರ ವಿರುದ್ಧ, ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು. ಆದರೆ ನಮ್ಮ ಕಾಳಜಿ ಸಾರ್ವಜನಿಕರ ಆರೋಗ್ಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ಅಗತ್ಯ: ಬಸವರಾಜ ಬೊಮ್ಮಾಯಿ
Advertisement
Advertisement
ಕೊರೊನಾ ಸೋಂಕು ಉಲ್ಬಣಗೊಂಡು ಜನತೆ ಸಂಕಷ್ಟಕ್ಕೆ ಒಳಗಾದರೆ, ಕಾಂಗ್ರೆಸ್ ನಾಯಕರು ಹೊಣೆ ಹೊರಬೇಕಾದೀತು ಎಂದು ಎಚ್ಚರಿಸಿದ ಸಚಿವರು, ಕಾಂಗ್ರೆಸ್ ನಡೆಗೆ ನಾಡಿನ ಜನತೆಯೂ ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಹೊಣೆಗೇಡಿತನ ಕಿಡಿಕಾರಿದ್ದಾರೆ.
Advertisement
ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನಿಭಾಯಿಸುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದಿದ್ದಾರೆ. ಇದನ್ನೂ ಓದಿ: ತಲೆ ಕೆಡಿಸಿಕೊಳ್ಳಬೇಡಾ, ನಾಳೆ ನಾನು ಜಾಯಿನ್ ಆಗ್ತೀನಿ: ಡಿಕೆಶಿ ಜೊತೆ ಸಿದ್ದು ಫೋನ್ ಟಾಕ್
Advertisement
ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದರು. ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ಧ. ಈ ವಿಚಾರದಲ್ಲಿ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಕೊರೊನಾ ನಿಬಂಧನೆಗಳನ್ನು ಪಾಲಿಸುವುದಿಲ್ಲ. ಬೇಕಾದರೆ ಜೈಲಿಗೆ ಹಾಕಿ ಎಂದು ಸವಾಲು ಎಸೆದಿದ್ದಾರೆ. ಇದು ಕಾಂಗ್ರೆಸ್‌ನವರ ಉದ್ಧಟತನವನ್ನು ತೋರಿಸುತ್ತದೆ. ಕಾಂಗ್ರೆಸ್ ನಾಯಕರ ಬಗ್ಗೆ ಜನಸಾಮಾನ್ಯರು ಜಿಗುಪ್ಸೆಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದು ಸೇರಿ 30 ಮಂದಿ ವಿರುದ್ಧ ಎಫ್‌ಐಆರ್ ದಾಖಲು