ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಹರಿಸಬೇಕಾದ ನೀರನ್ನು ಮಂಡ್ಯಗೆ ಹರಿಸುವಂತೆ ಸಿಎಂ ಕುಮಾರಸ್ವಾಮಿ ಅವರು ಆದೇಶ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಾಹಂ ಅವರು ಚುನಾವಣಾ ಅಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿಗೆ ಬರುವ ನೀರು ಮಂಡ್ಯಕ್ಕೆ ನೀರು ಬಿಡುವಂತೆ ಸಿಎಂ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ. ಮಂಡ್ಯ ರೈತರಿಗೆ ನೀರು ಕಡಿಮೆಯಾಗದಂತೆ ನೋಡಿಕೊಳ್ಳುವಂತೆ ಸಿಎಂ ಆದೇಶ ಮಾಡಿದ್ದಾರೆಂದು ಆರೋಪ ಇದೆ. ಆದ್ದರಿಂದ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿ ಮನವಿ ಮಾಡಿದ್ದಾರೆ. ತಮ್ಮ ದೂರಿನೊಂದಿಗೆ ಮಾಧ್ಯಮದಲ್ಲಿ ಪ್ರಸಾರವಾದ ವರದಿಯ ಕುರಿತ ಅಂಶಗಳನ್ನು ಸಾಕ್ಷಿಯಾಗಿ ನೀಡಿದ್ದಾರೆ.
Advertisement
Advertisement
ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಹೆಚ್ಚಿನ ನೀರು ಬಿಡುಗಡೆ ಮಾಡಲು ಪ್ರಭಾವ ಬೀರಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರು ಜನರಿಗೆ ನ್ಯಾಯಯುತವಾಗಿ ಸಿಗಬೇಕಾದ ನೀರನ್ನು ತಡೆಯಲಾಗಿದೆ. ಹೀಗಾಗಿ ಪ್ರಜಾ ಪ್ರತಿನಿಧಿ ಕಾಯ್ದೆಯ 121 ನಿಯಮದ ಅನ್ವಯ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.