ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತನ್ನ ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.
ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ.
Advertisement
ನಿರ್ದೇಶಕ ಮಹೇಶ್ ಅವರು ತಮ್ಮ ಗೆಳೆಯ ಧ್ರುವ ಸರ್ಜಾ ಅವರ ಪ್ರೇಮಕತೆಯನ್ನು ಹಂಚಿಕೊಂಡಿದ್ದು, ನನ್ನ ಗೆಳೆಯ ಧ್ರುವ ಸರ್ಜಾ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ನನಗೆ ಇದು ತುಂಬಾ ಖುಷಿಯ ವಿಚಾರವಾಗಿದ್ದು, ಮನೆಯಲ್ಲು ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಹಾಗೂ ಬಾಲ್ಯದ ಗೆಳತಿ ಪ್ರೇರಣಾ ಮದುವೆ ಆಗುತ್ತಿರುವುದು ಖುಷಿಯಾಗುತ್ತಿದೆ ಎಂದು ತಿಳಿಸಿದರು.
Advertisement
Advertisement
ಧ್ರುವ ಹಾಗೂ ಪ್ರೇರಣಾ ಅವರದ್ದು 16 ವರ್ಷದ ಪ್ರೀತಿ. ಧ್ರುವಗೆ 16 ವರ್ಷವಿದ್ದಾಗ ಆವರು ಪ್ರೀತಿಯಲ್ಲಿ ಬಿದ್ದಿದ್ದರು. ಸದ್ಯ ಈಗ ಅವರು ಪ್ರೇರಣಾ ಜೊತೆ ಮದುವೆ ಆಗುತ್ತಿದ್ದಾರೆ. ಧ್ರುವ ಹಾಗೂ ಪ್ರೇರಣಾ ತುಂಬಾ ಸಿಂಪಲ್ ಆಗಿ ಹಿಂದೂ ಸಂಪ್ರದಾಯದಂತೆ ಡಿಸೆಂಬರ್ ಮೊದಲ ವಾರದಲ್ಲಿ ರಿಂಗ್ ಬದಲಾಯಿಸಿಕೊಳ್ಳುವ ಮೂಲಕ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ. ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಆಂಜನೇಯ ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ನಡೆಯಲಿದೆ.
Advertisement
ಪ್ರೇರಣಾ ಬಸವನಗುಡಿಯ ಕಾಲೇಜಿನಲ್ಲಿ ಲೆಕ್ಚರರ್ ಆಗಿದ್ದರು. ಆಗ ಧ್ರುವ ಸರ್ಜಾ ಬಾಕ್ಸರ್ ಆಗಿದ್ದರು. ಸದ್ಯ ಈಗ ಪ್ರೇರಣಾ ಮನೆಯಲ್ಲಿದ್ದಾರೆ.
ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಆಂಜನೇಯ ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ನಡೆಯಲಿದೆ. ಈ ಕಲ್ಯಾಣ ಮಂಟಪದಲ್ಲಿ ಖ್ಯಾತ ನಟ, ಆರ್ಟ್ ಡೈರೆಕ್ಟರ್ ಅರುಣ್ ಸಾಗರ್ ಅವರು ನಿಶ್ಚಿತಾರ್ಥಕ್ಕೆ ಆಂಜನೇಯ ಮೂರ್ತಿಯ ಸೆಟ್ ಹಾಕಲಿದ್ದಾರೆ.
ಅರ್ಜುನ್ ಸರ್ಜಾ ಅವರ ಕುಟುಂಬ ಆಂಜನೇಯನ ಭಕ್ತರಾಗಿದ್ದು, ತಮ್ಮ ಯಾವುದೇ ಟ್ವೀಟ್ ನಲ್ಲಿ ಕೊನೆಗೆ `ಜೈ ಆಂಜನೇಯ’ ಎಂದು ಬರೆದು ಟ್ವೀಟ್ ಮಾಡುತ್ತಾರೆ. ಧ್ರುವ ಸರ್ಜಾ ಅವರ ನಿಶ್ಚಿತಾರ್ಥದಲ್ಲಿ ಅರುಣ್ ಸಾಗರ್ ಆಂಜನೇಯನ ಮೂರ್ತಿಯ ಸೆಟ್ ಹಾಕಲಿದ್ದಾರೆ. ಧ್ರುವ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಧ್ರುವ ಅಣ್ಣ ಚಿರಂಜೀವಿ ಸರ್ಜಾ ಅವರು ನಟಿ ಮೇಘನಾ ರಾಜ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಈಗ ಧ್ರುವ ಸರ್ಜಾ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
#ದೇಶ ಅಂತ ಬಂದ್ರೆ #ಭಾರತ
#ರಾಜ್ಯ ಅಂತ ಬಂದ್ರೆ #ಕರ್ನಾಟಕ
????#ಭಾಷೆ ಅಂತ ಬಂದ್ರೆ #ಕನ್ನಡ????
ಜೈ ಆಂಜನೇಯ ???????????? pic.twitter.com/X2SIUXWeLh
— Dhruva Sarja (@DhruvaSarja) November 1, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews