ಬೆಳಗಾವಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಕೂಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಈ ಬಗ್ಗೆ ರಮೇಶ್ ಜೊತೆಗೆ ಮಾತುಕತೆ ಮಾಡಲು ಸಾಧ್ಯವಾಗಿಲ್ಲ. ಸದ್ಯ ಅವರು ಬೆಂಗಳೂರಿಗೆ ಹೋಗಿದ್ದಾರೆ. ನಾನೂ ಸಹ ಸಂಜೆ ಹೋಗುತ್ತೇನೆ. ರಮೇಶ್ ಜಾರಕಿಹೊಳಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತಹ ಯಾವುದೇ ಪ್ರಸ್ತಾಪ ಇಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
Advertisement
Advertisement
ಹೈಕಮಾಂಡ್‍ನಿಂದ ದೆಹಲಿಗೆ ಬುಲಾವ್ ಬಂದಿರುವ ಬಗ್ಗೆ ಪ್ರಸ್ತಾಪಿಸಿದಾಗ, ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ವೇಣುಗೋಪಾಲ್‍ರೊಂದಿಗೆ ಅನೇಕ ಬಾರಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅಲ್ಲದೆ ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆಗೆ ಮಾತನಾಡಿದ್ದೇನೆ. ಸಮ್ಮಿಶ್ರ ಸರ್ಕಾರದ ಮುಂದಿನ ಯೋಜನೆಗಳ ಬೆಳವಣಿಗೆ, ಲೋಕಸಭಾ ಚುನಾವಣೆಗೆ ತಯಾರಿ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಕರೆಯಲಾಗಿದೆ. ಅಲ್ಲದೇ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲು ತೆರಳುತ್ತಿದ್ದೇನೆ ಎಂದು ತಿಳಿಸಿದರು.
Advertisement
ರಮೇಶ್ ಜಾರಕಿಹೊಳಿ ಮಾಜಿ ಸಿಎಂ ಸಿದ್ದರಾಮಯ್ಯನವರು ಭೇಟಿಯಾಗುವ ಸಾಧ್ಯತೆ ಇದೆ. ವಿದೇಶ ಪ್ರವಾಸದ ಬಳಿಕ ಅವರನ್ನು ಭೇಟಿಯಾಗಲು ತೆರಳಿದ್ದಾರೆ. ಸರ್ಕಾರ ಬಿಳಿಸುವ ಹಾಗೂ ಬಿಜೆಪಿ ಸಂಪರ್ಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಶಾಸಕರ ಹೇಳಿರುವ ಹಾಗೆ ಕಳೆದ 4 ತಿಂಗಳಿನಿಂದಲೂ ಬಿಜೆಪಿಯವರು ಪಕ್ಷಕ್ಕೆ ಆಹ್ವಾನಿಸುತ್ತಿರುವ ವಿಚಾರ ತಿಳಿದಿದೆ ಅಷ್ಟೆ ಎಂದು ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv