ಬೆಂಗಳೂರು: ಮಂಡ್ಯ (Mandya) ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ (National Highway) ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು (N Chaluvaraswamy) ಸೂಚಿಸಿದರು.
ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯಗೊಳಿಸುವಂತೆ ತಿಳಿಸಿದರು. ಇದನ್ನೂ ಓದಿ: ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಮಂಡ್ಯ ಜಿಲ್ಲೆಯ ಗಡಿಯ ಆರಂಭದಲ್ಲೆ ಸಂಪರ್ಕಿತ ಸರ್ವಿಸ್ ರಸ್ತೆಗೆ ಎಂಟ್ರಿ ಹಾಗೂ ಎಕ್ಸಿಟ್‌ಗಳನ್ನು ವೈಜ್ಞಾನಿಕವಾಗಿ ನಿರ್ಮಿಸುವಂತೆ ಹಾಗೂ ಮದ್ದೂರು ಹೆದ್ದಾರಿ ಬಳಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಡ್ರೈನೇಜ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು. ಇದನ್ನೂ ಓದಿ: ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ
ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 150 ಎ ಪಾಂಡವಪುರ – ನಾಗಮಂಗಲ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳಿದ್ದು, ಸಂಚಾರ ಮಾಡಲು ಅಸಾಧ್ಯವಾಗಿದ್ದು, ಶೀಘ್ರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಾಮಗಾರಿಗೆ ಅಗತ್ಯವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು. ಇದನ್ನೂ ಓದಿ: ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

ಶ್ರೀರಂಗಪಟ್ಟಣದಿಂದ ಕುಶಾಲನಗರದವರೆಗೆ 92 ಕಿಲೋಮೀಟರ್ ರಾಷ್ಟೀಯ ಹೆದ್ದಾರಿ ಹಾದುಹೋಗಲಿದ್ದು, ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ, ಭೂಸ್ವಾಧೀನ ಪ್ರಕ್ರಿಯೆ ಆದಷ್ಟು ಬೇಗ ಮುಗಿಸಿ ಕಾಮಗಾರಿ ಅನುಷ್ಠಾನ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು
ಎನ್‌ಹೆಚ್ 7 ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಹಾದುಹೋಗಲಿದ್ದು, ಬೆಳ್ಳೂರು ಕ್ರಾಸ್ ಬಳಿ ಸಂಪರ್ಕಿತ ಸರ್ವಿಸ್ ರಸ್ತೆಯನ್ನು ಅಗಲೀಕರಿಸುವಂತೆ ಹಾಗೂ ನಾಗಮಂಗಲ ಬೈಪಾಸ್ ರಸ್ತೆ ಮತ್ತು ಚುಂಚನಗಿರಿ- ಹೊಸಮನೆ ರಸ್ತೆ ಕಾಮಗಾರಿ, ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಇತರ ಕಾನೂನು ಕಾರ್ಯವಿಧಾನಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಫ್ಯೂಯಲ್ ಕಂಟ್ರೋಲ್ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

ಹಾಗೆಯೇ, ಮಂಡ್ಯ ಜಿಲ್ಲೆಯಲ್ಲಿ ಹಾದುಹೋಗುವ ಬಾಕಿ ಉಳಿದ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಚಿವ ಚಲುವರಾಯಸ್ವಾಮಿಯವರು ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

