ಉಡುಪಿ: ದೈವಾರಾಧಾನೆ ಹಿಂದುತ್ವದ ಭಾಗವಲ್ಲವೆಂದ ನಟ ಚೇತನ್ (Actor Chetan) ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆ (Karkala Police Station) ಯಲ್ಲಿ ದಾಖಲು ಮಾಡಲಾಗಿದೆ.
ಹಿಂದೂ ಜಾಗರಣಾ ವೇದಿಕೆ (Hindu Jagaran Vedike) ವತಿಯಿಂದ ಈ ದೂರು ದಾಖಲಿಸಲಾಗಿದೆ. ದೂರಿನಲ್ಲಿ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು
Advertisement
Advertisement
ಚೇತನ್ ಹೇಳಿದ್ದೇನು..?: ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ (Director Rishab Shetty) ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಮಹತ್ವ ಪಡೆದುಕೊಂಡಿತ್ತು. ಈ ಮಾತಿಗೆ ವಿರೋಧ ಎನ್ನುವಂತೆ ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆ ನೀಡಿದ್ದರು. ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧಿಸಿದ್ದರು. ಈ ಕುರಿತು ಪರ ವಿರೋಧ ಚರ್ಚೆ ಕೂಡ ನಡೆದಿತ್ತು. ಇದಕ್ಕೆ ಚೇತನ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ರಿಷಬ್ ಬಳಸಿದ `ಹಿಂದೂ ಸಂಸ್ಕೃತಿ’ ಪದಕ್ಕೆ ನನ್ನ ಆಕ್ಷೇಪಣೆ ಇದೆ ಎಂದಿದ್ದರು. ಚೇತನ್ ಹೇಳಿಕೆ ಬಾರೀಊ ವಿವಾದ ಸೃಷ್ಟಿಸಿತ್ತು.
Advertisement
Advertisement
ಈ ಬೆನ್ನಲ್ಲೇ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಚೇತನ್, ನಾನು ಚರ್ಚೆಯ ಮೂಲಕ ಗೆಲ್ಲಬೇಕು. ಸಂವಾದದ ಮೂಲಕ ಅರ್ಥ ಮಾಡಿಕೊಳ್ಳಬೇಕು. ನಾನು ಆಡಿದ ಮಾತುಗಳಲ್ಲಿ ಏನು ಸುಳ್ಳು ಇದೆ ಹೇಳಲಿ. ಯಾರಿಗೆ ನನ್ನನ್ನು ಸೋಲಿಸಲು ಆಗುವುದಿಲ್ಲವೋ, ಅವರು ಪೌರತ್ವದ ಬಗ್ಗೆ ಮಾತನಾಡುತ್ತಾರೆ. ನನ್ನ ಹುಟ್ಟು ನನ್ನ ಕೈಯಲ್ಲಿ ಇಲ್ಲ. ಯಾರ ಕೈಯಲ್ಲೂ ಇಲ್ಲ. ನಾನು ಯಾವಾಗಲೂ ಸತ್ಯದ ಪರವಾಗಿ ಇರುತ್ತೇನೆ. ಹಾಗಾಗಿ ಈ ರೀತಿಯ ಮಾತುಗಳನ್ನು ಕೇಳಿಸಿಕೊಳ್ಳುವುದು ಅನಿವಾರ್ಯ ಎಂದಿದ್ದರು. ಇದನ್ನೂ ಓದಿ: ಆಮದು ಮಾಡಿಕೊಂಡ ಧರ್ಮಗಳು ಎಂದು ಚೇತನ್ ಮತ್ತೆ ಕಿಡಿ