ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕೆಲವು ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ. ಇದರ ಅನುಭವ ನನಗೂ ಆಗಿದೆ. ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwara) ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ, ಸಂಸದ ಪ್ರತಾಪ್ ಸಿಂಹ ಬಳಿಕ ಹೊಂದಾಣಿಕೆ ರಾಜಕೀಯ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಾಗಿರಲಿಲ್ಲ. ಮಂತ್ರಿಮಂಡಲ ವಿಸ್ತರಣೆ ಮಾಡಲಿಲ್ಲ, ಸಚಿವ ಸ್ಥಾನಗಳನ್ನು ಖಾಲಿ ಬಿಡಲಾಯಿತು ಆಂತರಿಕ ಬೇಗುದಿ ಇದರಿಂದ ಸೃಷ್ಟಿಯಾಯಿತು. ಅಭ್ಯರ್ಥಿಗಳ ಆಯ್ಕೆಯಲ್ಲೂ ಕೆಲವು ಕ್ಷೇತ್ರಗಳಲ್ಲಿ ಹೊಂದಾಣಿಕೆಯಾಗಿದೆ. ಇದರ ಜೊತೆಗೆ ಕಾಂಗ್ರೆಸ್‍ನ್ನು ಕಟ್ಟಿ ಹಾಕುವ ಪ್ರಯತ್ನ ನಡೆಯಲಿಲ್ಲ. ಇದು ಬಿಜೆಪಿ ಸೋಲಿಗೆ ಕಾರಣವಾಗಿದೆ. ಈ ಚರ್ಚೆ ಈಗ ಅನಗತ್ಯ, ಮುಂದಿನ ಚುನಾವಣೆ ಬಗ್ಗೆ ಯೋಚನೆ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್
ಬೆಂಗಳೂರು (Bengaluru) ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಬಗ್ಗೆ ಮಾತನಾಡಿದ ಅವರು, ಲೋಕಸಭೆಗೆ ಸ್ಪರ್ಧೆ ಮಾಡಬೇಕು ಎನ್ನುವ ಯೋಚನೆ ಇದೆ. ಆದರೆ ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗಿ ಪಕ್ಷ ತಿರ್ಮಾನ ಮಾಡಲಿದೆ. ನಾನು ದೆಹಲಿಯಲ್ಲಿ ಕೆಲವು ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದೇನೆ ಈ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ಡಿ.ಕೆ ಸುರೇಶ್ ಚುನಾವಣಾ ರಾಜಕೀಯದ ಬಗ್ಗೆ ಯಾಕೆ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ ಎಂಬುದು ಗೊತ್ತಿಲ್ಲ. ಅಷ್ಟು ಸುಲಭವಾಗಿ ರಾಜಕೀಯ ಬಿಡುವ ವ್ಯಕ್ತಿಯಲ್ಲ. ಅವರ ಹೇಳಿಕೆ ಹಿಂದೆ ಗೂಢಾರ್ಥ ಇದೆ. ಅವರ ಅಣ್ಣನನ್ನು ಸಿಎಂ ಮಾಡಲು ಪ್ರಯತ್ನಿಸಿರಬೇಕು ದೆಹಲಿಗಿಂತ ಕರ್ನಾಟಕದಲ್ಲಿ ಸಕ್ರಿಯಾಗಲು ನಿರ್ಧರಿಸಬೇಕು ಎನಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು