ಸಹಕಲಾವಿದೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಜೈಲುಪಾಲಾಗಿ ಬಿಡುಗಡೆಗೊಂಡಿದ್ದ ಮಡೆನೂರು ಮನು (Madenur Manu) ಜೊತೆ ಇದೀಗ ಸಂತ್ರಸ್ತೆ ಕಾಂಪ್ರಮೈಸ್ ಮಾಡಿಕೊಂಡಿದ್ದಾರೆ.
ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್ (Rape Case) ಹಾಕಿದ್ದ ಕಾಮಿಡಿ ಕಿಲಾಡಿಗಳು (Comedy Khiladigalu) ಖ್ಯಾತಿಯ ನಟಿ ಇದೀಗ ಕೇಸನ್ನು ಹಿಂಪಡೆದಿದ್ದಾರೆ.
ಮಡೆನೂರು ಮನು ವಿರುದ್ಧ ಸಂತ್ರಸ್ತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ (Annapoorneshwari Nagar Police Station) ದೂರು ನೀಡಿದ್ದರು. ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮಡೆನೂರು ಮನುವನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯ ಮಡೆನೂರು ಮನುವನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ, ಅತ್ಯಾಚಾರ ಕೇಸ್‌ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.